ಈಗಿನ ಸುದ್ದಿ

ಲೋಕಪಾಲ ಮಸೂದೆ ಮಂಡನೆಗೆ 'ಲೋಕಾ' ಅಡ್ಡಿ

ಲೋಕಪಾಲ ಮಸೂದೆ ಮಂಡನೆಗೆ 'ಲೋಕಾ' ಅಡ್ಡಿ
Published On :

ಬೆಂಗಳೂರು: ಲೋಕಾಯುಕ್ತ ನ್ಯಾಯಮೂರ್ತಿ ಭಾಸ್ಕರ್ ರಾವ್ ಅವರು ಭಾನುವಾರ ರಾಜ್ಯಪಾಲ ಹೆಚ್.ಭಾರದ್ವಾಜ್ ಅವರನ್ನು ಭೇಟಿ ಮಾಡಿದ್ದು, ಲೋಕಪಾಲ ಮಸೂದೆ ಮಂಡನೆಗೆ ತಡೆ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ರಾಜ್ಯ ಸರ್ಕಾರ ಮಂಡಿಸಲಿರುವ ನೂತನ ಲೋಕಪಾಲ ಮಸೂದೆಯಲ್ಲಿ ಸಾಕಷ್ಟು ಲೋಪದೋಷಗಳಿದ್ದು, ತಿದ್ದುಪಡಿಯ ಅವಶ್ಯಕತೆ ಇದೆ. ಹೀಗಾಗಿ ತಾವು ಕೂಡಲೇ ಮಧ್ಯ ಪ್ರವೇಶಿಸಿ ಲೋಕಪಾಲ ಮಸೂದೆ ಮಂಡನೆಯನ್ನು ತಡೆಯಬೇಕು ಎಂದು ಲೋಕಾಯುಕ್ತ ನ್ಯಾಯಮೂರ್ತಿ ಭಾಸ್ಕರ್ ರಾವ್ ಅವರು ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಅಂತೆಯೇ ಲೋಕಾಯುಕ್ತ ಸಂಸ್ಥೆಗೆ ಸಂಪೂರ್ಣ ಅಧಿಕಾರ ನೀಡಬೇಕು ಎಂದು ಕೇಳಿರುವ ಅವರು, ಭ್ರಷ್ಟ ಅಧಿಕಾರಿಗಳನ್ನು ತಾವೇ ತನಿಖೆ ನಡೆಸಲು ಅಧಿಕಾರ ನೀಡಬೇಕು. ಮತ್ತು ಇದರಲ್ಲಿ ಯಾವುದೇ ಕಾರಣಕ್ಕೂ ಸರ್ಕಾರದ ಹಸ್ತಕ್ಷೇಪವಿರಬಾರದು. ಸರ್ಕಾರದ ಅನುಮತಿ ಇಲ್ಲದೆಯೇ ತನಿಖೆ ನಡೆಸುವಂತಹ ಅಧಿಕಾರ ಬೇಕು ಎಂದು ಕೇಳಿದ್ದಾರೆ.

ನಾಳೆ ರಾಜ್ಯ ವಿಧಾನಸಭಾ ಕಲಾಪದಲ್ಲಿ ರಾಜ್ಯ ಸರ್ಕಾರ ತನ್ನ ಲೋಕಪಾಲ ಮಸೂದೆಯನ್ನು ಮಂಡಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಹೀಗಾಗಿಯೇ ನ್ಯಾ.ಭಾಸ್ಕರ್ ರಾವ್ ಅವರು ರಾಜ್ಯಪಾಲರನ್ನು ಭೇಟಿ ಮಾಡಿ ಈ ಬಗ್ಗೆ ಚರ್ಚಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.