ಈಗಿನ ಸುದ್ದಿ

ದೇಶವನ್ನು ಒಡೆದು ಆಳಲು ಯತ್ನಿಸುತ್ತಿದ್ದಾರೆ: ರಾಹುಲ್ ಗಾಂಧಿ

ದೇಶವನ್ನು ಒಡೆದು ಆಳಲು ಯತ್ನಿಸುತ್ತಿದ್ದಾರೆ: ರಾಹುಲ್ ಗಾಂಧಿ
Published On :

ಡೆಹ್ರಾಡೂನ್: ಕೆಲವರು ದೇಶವನ್ನು ಒಡೆದು ಆಳಲು ಯತ್ನಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಹೇಳಿದ್ದಾರೆ.

ಉತ್ತರಾಖಂಡದ ಡೆಹ್ರಾಡೂನ್ನಲ್ಲಿ ನಡೆದ ಕಾಂಗ್ರೆಸ್ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ರಾಹುಲ್ ಗಾಂಧಿ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರ ವಿರುದ್ಧ ತೀವ್ರ ವಾಗ್ದಾಳಿ ಮಾಡಿದರು. ರಾಜಕಾರಣದಲ್ಲಿ ಕೋಪ ಮತ್ತು ಅಹಂಗೆ ಸ್ಥಳವಿಲ್ಲ. ಕೆಲವರು ದೇಶವನ್ನು ಒಡೆದು ಆಳಲು ಯತ್ನಿಸುತ್ತಿದ್ದು, ಅದು ಸಾಧ್ಯವಿಲ್ಲ. ದೇಶದ ಜನ ಇದಕ್ಕೆ ಅವಕಾಶ ಮಾಡಿಕೊಡುವುದಿಲ್ಲ.

ಅವರು ನನನ್ನು ಪ್ರಧಾನಿಯನ್ನಾಗಿ ಮಾಡಿ, ದೇಶದ ಎಲ್ಲ ಸಮಸ್ಯೆಗಳು ಬಗೆಹರಿಯುತ್ತವೆ ಎಂದು ಹೇಳುತ್ತಾರೆ. ಆದರೆ ಅವರಿಗೆ ಬೇಕಿರುವುದು ಅಭಿವೃದ್ದಿಯಲ್ಲ ಬದಲಿಗೆ ಅಧಿಕಾರ, ನಿಮ್ಮಿಂದ ನಿಮ್ಮ ಅಧಿಕಾರವನ್ನು ಕಿತ್ತುಕೊಳ್ಳಲು ಬಯಸಿದ್ದಾರೆ. ಗುಜರಾತ್ನಲ್ಲಿ ಬಲಿಷ್ಠ ಲೋಕಾಯುಕ್ತ ಬರುವುದು ಅವರಿಗೆ ಬೇಕಿರಲಿಲ್ಲ. ಹೀಗಾಗಿಯೇ ನಿಶ್ಯಕ್ತ ಲೋಕಾಯುಕ್ತ ರಚನೆ ಮಾಡಿಕೊಂಡಿದ್ದಾರೆ. ಲೋಕಾಯುಕ್ತ ಸಂಪೂರ್ಣ ಅಧಿಕಾರವನ್ನು ಕಿತ್ತುಕೊಂಡು ನೆಪ ಮಾತ್ರಕ್ಕೆ ಲೋಕಾಯುಕ್ತವನ್ನು ನೇಮಿಸಿಕೊಂಡಿದ್ದಾರೆ. ಈಗ ಹೇಳಿ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡುತ್ತಿರುವುದು ನಾವೇ ಅಥವಾ ಅವರೇ. ಇದನ್ನು ನೀವು ಅರ್ಥ ಮಾಡಿಕೊಂಡು ನಮ್ಮನ್ನು ಬೆಂಬಲಿಸಿ ಎಂದು ರಾಹುಲ್ ಗಾಂಧಿ ಹೇಳಿದರು.

ಉತ್ತರಾಖಂಡ ನೆರೆ ಕುರಿತು ಮಾತನಾಡಿ ರಾಹುಲ್ ಗಾಂಧಿ, ನೆರೆ ಪೀಡಿತ ಪ್ರದೇಶಗಳಲ್ಲಿ ಕಾರ್ಯಾಚರಣೆ ನಡೆಸಿದ ಭಾರತೀಯ ಸೇನೆಯ ಕಾರ್ಯ ಶ್ಲಾಘನೀಯ. ತಮ್ಮ ಪ್ರಾಣವನ್ನು ಪಣವಾಗಿಟ್ಟು ಜನರನ್ನು ಕಾಪಾಡಿದ್ದಾರೆ. ಪ್ರವಾಹ ಪೀಡಿತ ಪ್ರದೇಶದ ಸಂತ್ರಸ್ಥರ ನೆರವಿಗೆ ಕೇಂದ್ರಸರ್ಕಾರ ಬದ್ಧ. ಈ ಬಗ್ಗೆ ನಾನು ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದೇನೆ. ಅವರು ಕೂಡ ಸಕರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಶೀಘ್ರದಲ್ಲಿಯೇ ಉತ್ತರಾಖಂಡದಲ್ಲಿ ಮತ್ತೆ ಮೊದಲಿನಂತೆ ಪ್ರವಾಸೋಧ್ಯಮ ಆರಂಭಗೊಳ್ಳಲ್ಲಿದ್ದು, ಕೇಂದ್ರ ಸರ್ಕಾರ ಇದಕ್ಕೆ ಬೇಕಾಗುವ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ.

ಸಂತ್ರಸ್ಥರ ನೆರವಿಗಾಗಿ ಕೇಂದ್ರ ಸರ್ಕಾರ ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿತ್ತು. ನಾನು ಇಂದು ಕರೆಕೊಡುತ್ತಿದ್ದೇನೆ ನೆರಂಸಂತ್ರಸ್ಥರಿಗೆ ನೀವು ಕೂಡ ನೆರವಾಗಿ. ಉತ್ತರಾಖಂಡದಲ್ಲಿ ಯುವಕರಿಗೆ ಆದ್ಯತೆ ನೀಡಲು ನಾವು ಐಐಟಿ,ಐಐಎಂ ಮತ್ತು ಎನ್ ಐಐಟಿಗಳನ್ನು ನಿರ್ಮಿಸಿದ್ದೇವೆ. ವಿಧಾನಸಭೆಯಲ್ಲಿ ಕನಿಷ್ಟ ಅರ್ಧದಷ್ಟು ಮಹಿಳೆಯರು ಕಾಣಿಸಿಕೊಳ್ಳಬೇಕು ಎನ್ನುವುದು ನನ್ನ ಬಯಕೆ. ನಮಗೆ ದೇಶದ ಮಹಿಳೆಯರ ಮನಃಸ್ಥಿತಿಗೊತ್ತು. ಒಂದು ಮನೆಯನ್ನು ನಿಭಾಯಿಸುವಲ್ಲಿ ಮಹಿಳೆಯ ಪಾತ್ರ ಅನನ್ಯ, ಹೀಗಾಗಿಯೇ ದೇಶದ ಮಹಿಳೆಯ ಕಷ್ಟವನ್ನು ಅರಿತ ನಾವು ವರ್ಷಕ್ಕೆ 12 ಸಿಲಿಂಡರ್ಗಳನ್ನು ನೀಡುತ್ತಿದ್ದೇವೆ ಎಂದು ರಾಹುಲ್ ಗಾಂಧಿ ಹೇಳಿದರು.

ಒಟ್ಟಾರೆ ಅತ್ತ ಪಂಜಾಬ್ನಲ್ಲಿ ಕಾಂಗ್ರೆಸ್ ವಿರುದ್ಧ ನರೇಂದ್ರ ಮೋದಿ ಅವರು ಹರಿಹಾಯ್ದರೆ ಇತ್ತ ಉತ್ತರಾಖಂಡ್ನಲ್ಲಿ ರಾಹುಲ್ ಗಾಂಧಿ ಬಿಜೆಪಿ ವಿರುದ್ಧ ಕಿಡಿ ಕಾರುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.