ಸಲ್ಮಾನ್ 'ಹಿಟ್ ಅಂಡ್ ರನ್': ಮಾ. 26ರಿಂದ ಮರು ವಿಚಾರಣೆ

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ವಿರುದ್ಧದ 11 ವರ್ಷಗಳ ಹಳೆಯದಾದ ಹಿಟ್ ಅಂಡ್ ರನ್ ಪ್ರಕರಣದ ಮರು ವಿಚಾರಣೆ ಮಾರ್ಚ್ 26ರಿಂದ ನಡೆಯಲಿದೆ.
ಹಿಟ್ ಅಂಡ್ ರನ್ ಪ್ರಕರಣದ ವಿಚಾರಣೆಯನ್ನು ಹೊಸದಾಗಿ ನಡೆಸುವಂತೆ ಮುಂಬೈನ ಸೆಷನ್ಸ್ ಕೋರ್ಟ್ ಕಳೆದ ಡಿ. 26 ರಂದು ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ಸಾಕ್ಷ್ಯಗಳ ಹೇಳಿಕೆ ದಾಖಲು ಮತ್ತು ಪಾಟೀ ಸವಾಲು ಸೇರಿದಂತೆ ಎಲ್ಲ ಪ್ರಕ್ರಿಯೆಗಳು ಪುನರಾರಂಭಗೊಳ್ಳಲಿವೆ.
ಮಾರ್ಚ್ 26 ರಂದು ಪ್ರಕರಣದ ಮರು ವಿಚಾರಣೆ ಪ್ರಾರಂಭವಾಗುವ ಹಿನ್ನೆಲೆಯಲ್ಲಿ ಎಲ್ಲಾ 17 ಸಾಕ್ಷಿಗಳಿಗೆ ಖುದ್ದು ಹಾಜರಾಗುವಂತೆ ಸಮನ್ಸ್ ನೀಡಲು ಕೋರ್ಟ್ ನಿರ್ಧರಿಸಿದೆ.
ಸಲ್ಮಾನ್ ವಿರುದ್ಧ ಆರಂಭಿಕ ಹಂತದಲ್ಲಿ ಹೊರಸಿಲಾಗಿದ್ದ 'ನಿರ್ಲಕ್ಷ್ಯದ ಚಾಲನೆ' ಆರೋಪವನ್ನು, ಪ್ರಕರಣದ ವಿಚಾರಣೆಯ ಮಧ್ಯಭಾಗದಲ್ಲಿ 'ಉದ್ದೇಶಪೂರ್ವಕವಲ್ಲದ ಕೊಲೆ' ಎಂದು ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಬದಲಿಸಿ, ಪ್ರಕರಣವನ್ನು ಸೆಷನ್ಸ್ ನ್ಯಾಯಾಲಯಕ್ಕೆ ಒಪ್ಪಿಸಿತ್ತು. ಇದರ ವಿರುದ್ಧ ಸಲ್ಮಾನ್ ಖಾನ್ ಅವರು ಅರ್ಜಿ ಸಲ್ಲಿಸಿದ್ದರು. ಆದರೆ ನ್ಯಾಯಾಧೀಶರು ಅರ್ಜಿಯನ್ನು ವಜಾಗೊಳಿಸಿದ್ದರು.
ಉದ್ದೇಶಪೂರ್ವಕವಲ್ಲದ ಕೊಲೆ ಆರೋಪದಡಿ ಗರಿಷ್ಠ 10 ವರ್ಷ ಶಿಕ್ಷೆ ವಿಧಿಸಬಹುದಾಗಿದ್ದರಿಂದ, ಇಡೀ ಪ್ರಕರಣದ ವಿಚಾರಣೆಯನ್ನು ಹೊಸದಾಗಿ ನಡೆಸಬೇಕು ಎಂದು ಸಲ್ಮಾನ ಖಾನ್ ಮತ್ತೊಮ್ಮೆ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಹೊಸದಾಗಿ ವಿಚಾರಣೆ ನಡೆಸಲು ನ್ಯಾಯಾಧೀಶರು ಆದೇಶಿಸಿದ್ದರು.
2002ರ ಸೆ.28 ರಂದು ಸಲ್ಮಾನ್ ಖಾನ್ ಅವರು ರಸ್ತೆ ಬದಿ ಮಲಗಿದ್ದವರ ಮೇಲೆ ಕಾರು ಚಲಾಯಿಸಿ ಪರಾರಿಯಾಗಿದ್ದರು. ಈ ಘಟನೆಯಲ್ಲಿ ಒಬ್ಬ ವ್ಯಕ್ತ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


