ಸಿಎಂ ನಿತೀಶ್ ಕುತಂತ್ರದಿಂದ ಆರ್ಜೆಡಿಯಲ್ಲಿ ಬಂಡಾಯ: ಲಾಲು

ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಕುತಂತ್ರದಿಂದಾಗಿ ರಾಷ್ಟ್ರೀಯ ಜನತಾ ದಳ(ಆರ್ಜೆಡಿ)ದಲ್ಲಿ ಬಂಡಾಯ ಸ್ಫೋಟಗೊಂಡಿದೆ ಎಂದು ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಮಂಗಳವಾರ ಆರೋಪಿಸಿದ್ದಾರೆ.
ಆರ್ಜೆಡಿ 22 ಶಾಸಕರ ಪೈಕಿ 13 ಶಾಸಕರು ಪಕ್ಷಕ್ಕೆ ರಾಜಿನಾಮೆ ನೀಡಿ, ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯುಗೆ ಬೆಂಬಲ ನೀಡಲು ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಪಾಟ್ನಾದಲ್ಲಿ ಸುದ್ದಿಗೋಷ್ಠಿ ನಡೆಸಿದ ಲಾಲು ಪ್ರಸಾದ್ ಯಾದವ್, ಸಿಎಂ ನಿತೀಶ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು. ನಿತೀಶ್ ತಮ್ಮ ಪಕ್ಷ ಒಡೆಯುವ ಕೆಲಸ ಮಾಡುತ್ತಿದ್ದು, ಅವರ ಕುತಂತ್ರಕ್ಕೆ ಬಲಿಯಾಗಿ ಆರ್ಜೆಡಿಯಲ್ಲಿ ಬಂಡಾಯ ಶುರುವಾಗಿದೆ ಎಂದು ಕಿಡಿಕಾರಿದ್ದಾರೆ.
ಆದರೆ ನಿತೀಶ್ ಕುಮಾರ್ ಅವರ ಕುತಂತ್ರ ಇಲ್ಲಿ ಪ್ರಯೋಜನಕ್ಕೆ ಬರುವುದಿಲ್ಲ. ಸದ್ಯ ಆರ್ಜೆಡಿಯ 13 ಶಾಸಕರ ಪೈಕಿ 6 ಶಾಸಕರು ಸ್ವಪಕ್ಷದಲ್ಲೇ ಉಳಿದುಕೊಂಡಿದ್ದಾರೆ. ಇನ್ನುಳಿದ 7 ಶಾಸಕರು ಶೀಘ್ರದಲ್ಲೇ ಸ್ವಪಕ್ಷಕ್ಕೆ ಮರಳಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬಿಹಾರ ಸ್ಪೀಕರ್ ಅವರೇ ಈ ಬಂಡಾಯ ನೇತೃತ್ವ ವಹಿಸಿದ್ದಾರೆ. ಅವರ ಅಣತಿಯಂತೆ ಆರ್ಜೆಡಿ ಶಾಸಕರು ರಾಜಿನಾಮೆ ನೀಡಿದ್ದಾರೆ ಎಂದು ಲಾಲು ಆರೋಪಿಸಿದ್ದಾರೆ.
ಬಿಜೆಪಿ ಮತ್ತು ಜೆಡಿಯು ಪಕ್ಷಗಳು ಒಗ್ಗೂಡಿ ಆರ್ಜೆಡಿ ಪಕ್ಷವನ್ನು ಒಡೆಯಲು ತಂತ್ರ ರೂಪಿಸುತ್ತಿವೆ. ಆದರೆ ನಮ್ಮ ಪಕ್ಷ ಯಾವುದೇ ಕಾರಣಕ್ಕೂ ಅವರ ಕುತಂತ್ರಕ್ಕೆ ಬಲಿಯಾಗುವುದಿಲ್ಲ ಎಂದ ಲಾಲು ಪ್ರಸಾದ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


