ಈಗಿನ ಸುದ್ದಿ

'ಕನ್ನಡಪ್ರಭ ವರ್ಷದ ವ್ಯಕ್ತಿ' ಈಗ ಆಪ್ ಅಭ್ಯರ್ಥಿ?

'ಕನ್ನಡಪ್ರಭ ವರ್ಷದ ವ್ಯಕ್ತಿ' ಈಗ ಆಪ್ ಅಭ್ಯರ್ಥಿ?
Published On :

ಬೆಂಗಳೂರು: 2004ರ 'ಕನ್ನಡಪ್ರಭ ವರ್ಷದ ವ್ಯಕ್ತಿ' ಪ್ರಶಸ್ತಿಗೆ ಆಯ್ಕೆಯಾಗಿದ್ದ ಅಕ್ಷರ ಸಂತ ಹರೇಕಳ ಹಾಜಬ್ಬ ಅವರನ್ನು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಮಂಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಸಾಧ್ಯತೆ ಇದೆ.

ಹಾಜಬ್ಬ ಅವರು ಕಿತ್ತಳೆ ಹಣ್ಣು ಮಾರಾಟ ಮಾಡುತ್ತಾ ದೇಣಿಗೆ ಸಂಗ್ರಹಿಸಿ ಮಂಗಳೂರಿನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಯನ್ನು ಸ್ಥಾಪಿಸಿದ್ದಾರೆ. ಇವರ ನಿಸ್ವಾರ್ಥ ಸೇವೆಗಾಗಿ ರಾಜ್ಯ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ. ಇದೀಗ ಆಪ್ ಅವರನ್ನು ಚುನಾವಣೆಗೆ ನಿಲ್ಲಿಸುವ ಯತ್ನ ನಡೆಸಿದೆ.

ರಾಷ್ಟ್ರ ರಾಜಧಾನಿಯಲ್ಲಿ ಅಧಿಕಾರದ ರುಚಿ ನೋಡಿರುವ ಆಮ್ ಆದ್ಮಿ ಪಕ್ಷ, ರಾಜ್ಯದಲ್ಲೂ ನಾಲ್ಕನೆ ಪಕ್ಷವಾಗಿ ರಾಜಕೀಯ ನೆಲೆ ಕಂಡುಕೊಳ್ಳಲು ಯತ್ನಿಸುತ್ತಿದೆ. ಈ ಸಂಬಂಧ ಉತ್ತಮ ಅಭ್ಯರ್ಥಿಗಳ ಹುಡುಕಾಟದಲ್ಲಿರುವ ಆಪ್, ನಟರಾದ ಉಪೇಂದ್ರ, ರಮೇಶ್ ಅರವಿಂದ್ ಮತ್ತು ಖ್ಯಾತ ಐಟಿ ಉದ್ಯಮಿ ಬಾಲಕೃಷ್ಣನ್ ಅವರನ್ನು ಕಣಕ್ಕಿಳಿಸುವ ಯತ್ನ ನಡೆಸುತ್ತಿದೆ. ಅಲ್ಲದೆ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಕಡಿದಾಳ್ ಶಾಮಣ್ಣ ಅವರಿಗೆ ಟಿಕೆಟ್ ನೀಡುವ ಚಿಂತನೆ ನಡೆಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.