ಈಗಿನ ಸುದ್ದಿ

ನನ್ನ ಬಜೆಟ್ ಸಾಧನೆಗಳ ಸರಮಾಲೆ: ಸಿಎಂ

ನನ್ನ ಬಜೆಟ್  ಸಾಧನೆಗಳ ಸರಮಾಲೆ: ಸಿಎಂ
Published On :

ಬೆಂಗಳೂರು: ತಮ್ಮ ಬಜೆಟ್‌ನ್ನು ಸುಳ್ಳಿನ ಸರಮಾಲೆ ಎಂದಿದ್ದ ಪ್ರತಿಪಕ್ಷದ ನಾಯಕರಿಗೆ ತಿರುಗೇಟು ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನನ್ನ ಬಜೆಟ್ ಸುಳ್ಳಿನ ಸರಮಾಲೆ ಅಲ್ಲ. ಸಾಧನೆಗಳ ಸರಮಾಲೆ ಎಂದು ಬುಧವಾರ ಹೇಳಿದ್ದಾರೆ.

ಇಂದು ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯ ವೇಳೆ ಮಾತನಾಡಿದ ಸಿಎಂ, ನಮ್ಮದು ನಡಿದಂತೆ ನಡೆಯುವ ಸರ್ಕಾರ. ಮೊದಲು ನೀವು ಬಜೆಟ್ ನೋಡುವ ದೃಷ್ಟಿಕೋನವನ್ನು ಬದಲಾಯಿಸಿಕೊಳ್ಳಿ ಎಂದು ಪ್ರತಿಪಕ್ಷ ನಾಯಕರಾದ ಜಗದೀಶ್ ಶೆಟ್ಟರ್ ಹಾಗೂ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಸಲಹೆ ನೀಡಿದರು.

ನನ್ನ ಬಜೆಟ್ ಸುಳ್ಳಿನ ಸರಮಾಲೆ ಅಲ್ಲ. ಚುನಾವಣೆ ವೇಳೆ ನಾವು ನೀಡಿದ್ದ 165 ಭರವಸೆಗಳ ಪೈಕಿ ಮೊದಲ ಬಜೆಟ್‌ನಲ್ಲೇ 65 ಭರವಸೆಗಳನ್ನು ಈಡೇರಿಸಿದ್ದೇವೆ. ಇನ್ನು ಎರಡನೇ ಬಜೆಟ್‌ನಲ್ಲಿ 30 ಭರವಸೆಗಳನ್ನು ಈಡೇರಿಸಿದ್ದೇವೆ ಎಂದು ಸಿಎಂ ಸದನಕ್ಕೆ ಉತ್ತರ ನೀಡಿದರು.

ಈಗಾಗಲೇ ಬಜೆಟ್‌ನಲ್ಲಿ ಘೋಷಿಸಿದ 272 ವಿವಿಧ ಯೋಜನೆಗಳಿಗೆ ಚಾಲನೆ ನೀಡಲಾಗಿದೆ ಮತ್ತು ಇದಕ್ಕೆ ಪೂರಕ ಅನುದಾನ ಸಹ ಒದಗಿಸಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.