ಈಗಿನ ಸುದ್ದಿ

ಮೋದಿ 'ನಪುಂಸಕ' ಎನ್ನಲು ನಾನು ವೈದ್ಯನಲ್ಲ: ಖುರ್ಷಿದ್

ಮೋದಿ 'ನಪುಂಸಕ' ಎನ್ನಲು ನಾನು ವೈದ್ಯನಲ್ಲ: ಖುರ್ಷಿದ್
Published On :

ನವದೆಹಲಿ: ಭಾರತೀಯ ಜನತಾ ಪಕ್ಷ(ಬಿಜೆಪಿ)ದ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರನ್ನು 'ನಪುಂಸಕ' ಎಂದು ನಾನು ಜರಿದಿಲ್ಲ. ಬಿಜೆಪಿ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ, ಕೇಂದ್ರ ಸಚಿವ ಸಲ್ಮಾನ್ ಖುರ್ಷಿದ್ ಅವರು ಬುಧವಾರ ಸ್ಪಷ್ಟನೆ ನೀಡಿದ್ದಾರೆ.

ಬಿಜೆಪಿ ಟೀಕೆಗೆ ಪ್ರತಿಕ್ರಿಯಿಸಿರುವ ಖುರ್ಷಿದ್, ನನ್ನ ಹೇಳಿಕೆಯನ್ನು ಬಿಜೆಪಿ ತಪ್ಪಾಗಿ ಅರ್ಥೈಸಿದೆ. ನಾನು ಆ ಅರ್ಥದಲ್ಲಿ ಹೇಳಿದ್ದಲ್ಲ. ಆ ಪದದ ಅರ್ಥ ವಿವರಣೆಬೇಕಿದ್ದರೆ ಮೋದಿ ಅವರಿಗೆ ನಾನು ನಿಘಂಟು(ಡಿಕ್ಷನರಿ)ವೊಂದನ್ನು ಕಳಿಸಿಕೊಡುತ್ತೇನೆ ಎಂದರು. ಅಲ್ಲದೆ ನಪುಂಸಕ ಪದವನ್ನು ದೈಹಿಕವಾಗಿ ಅಸಮರ್ಥರಿಗೆ ಬಳಸುತ್ತಾರೆ. ಆದರೆ ನಾನು ಮೋದಿ ಅವರ ವೈದ್ಯನಲ್ಲ. ಅವರನ್ನು ಪರೀಕ್ಷಿಸಿ, ಅವರ ದೇಹ ಸಾಮರ್ಥ್ಯದ ಬಗ್ಗೆ ತಿಳಿಸಲು ಎಂದು ಹೇಳಿದ್ದಾರೆ.

ಗುಜರಾತ್ ಗಲಭೆ ನಿಯಂತ್ರಿಸುವಲ್ಲಿ ನರೇಂದ್ರ ಮೋದಿ ಅವರು ವಿಫಲರಾಗಿದ್ದು, ಅವರಿಗೆ ರಾಜಕೀಯ ಇಚ್ಚಾಶಕ್ತಿಯ ಕೊರತೆಯಿಂದಾಗಿಯೇ ಹೊರತು, ಮೋದಿಯನ್ನು 'ಶಕ್ತಿಹೀನ' ಎಂದು ನಾನು ಬಳಸಿಲ್ಲ ಎಂದು ಖುರ್ಷಿದ್ ಸ್ಪಷ್ಟಿಕರಣ ನೀಡಿದ್ದಾರೆ.

2002ರ ಗುಜರಾತ್ ಗಲಭೆಯನ್ನು ನಿಯಂತ್ರಿಸುವಲ್ಲಿ ವಿಫಲವಾಗಿರುವ ನರೇಂದ್ರ ಮೋದಿ ಒಬ್ಬ ನಪುಂಸಕ ಎಂದು ಖುರ್ಷಿದ್ ಹೇಳಿದ್ದರು. ಇದಕ್ಕೆ ಖಾರವಾಗಿ ಪ್ರತಿಕ್ರಿಯಿಸಿದ್ದ ಬಿಜೆಪಿ, ಖುರ್ಷಿದ್ ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಅಲ್ಲದೆ ಕೊಳಕು ಮನಸಿನ ರಾಜಕೀಯ ವಿರೋಧಿಗಳು ಮಾತ್ರ ಇಂತಹ ಪದಗಳನ್ನು ಬಳಸುತ್ತಾರೆ. ಸಲ್ಮಾನ್ ಖುರ್ಷಿದ್ ಅವರ ವಿದೇಶಿ ಶಿಕ್ಷಣ ದೇಶಿ ಮೌಲ್ಯಗಳನ್ನು ಮರೆತಂತಿದೆ ಎಂದು ಬಿಜೆಪಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.