ಈಗಿನ ಸುದ್ದಿ

ಐವರು ಸಹೋದ್ಯೋಗಿಯನ್ನು ಕೊಂದು ಯೋಧ ಆತ್ಮಹತ್ಯೆ

Published On :

ಶ್ರೀನಗರ: ಭಾರತೀಯ ಸೇನೆಯ ಯೋಧನೊಬ್ಬ ತನ್ನ ಐವರು ಸಹೋದ್ಯೋಗಿಗಳನ್ನು ಕೊಂದು ತಾನು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗುರುವಾರ ನಡೆದಿದೆ.

ಇಂದು ಬೆಳಗ್ಗೆ ಸುಮಾರು 2 ಗಂಟೆಯ ಸಮಯದಲ್ಲಿ ಗಾಢ ನಿದ್ರೆಯಲ್ಲಿದ್ದ ತನ್ನ ಐವರು ಸಹೋದ್ಯೋಗಿಗಳ ತಲೆಗೆ ಗುಂಡು ಹಾರಿಸಿ ಕೊಂದಿದ್ದಾನೆ ಎಂದು ತಿಳಿದುಬಂದಿದೆ.

ಜಮ್ಮು ಮತ್ತು ಕಾಶ್ಮೀರದ ಗಂಡೇರ್‌ಬಾಲ್ ಜಿಲ್ಲೆಯ ಸಫಪೊರದಲ್ಲಿರುವ ಸೇನಾನೆಲೆಯ 13 ರಾಷ್ಟ್ರೀಯ ರೈಫಲ್‌ನ ಶಿಬಿರದಲ್ಲಿ ಈ ದುರ್ಘಟನೆ ನಡೆದಿದೆ. ಈ ಹಿನ್ನೆಲೆಯಲ್ಲಿ ನಮ್ಮ ಸೈನಿಕನೊಬ್ಬ ತನ್ನ ಐವರು ಯೋಧರನ್ನು ಕೊಂದು ಕೊನೆಗೆ ತಾನೂ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಶರಣಾಗಿದ್ದಾನೆ ಎಂದು ಸೇನೆಯ ವಕ್ತಾರರು ಸ್ಪಷ್ಟಪಡಿಸಿದ್ದು, ಈ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸಲಾಗಿದೆ.

ಸೇನಾನೆಲೆಯ 13ನೇ ರಾಷ್ಟ್ರೀಯ ರೈಫಲ್ ಶಿಬಿರದಲ್ಲಿ ಆರು ಸೈನಿಕರ ಮೇಲ್ವಿಚಾರಕನಾಗಿ ನಿಯೋಜಿತನಾಗಿದ್ದ ಯೋಧ ಈ ದಾಳಿ ನಡೆಸಿದ್ದು, ಈ ಘಟನೆಯಲ್ಲಿ ಐವರು ಸ್ಥಳದಲ್ಲೆ ಮೃತಪಟ್ಟಿದ್ದು, ಮತ್ತೋರ್ವ ಯೋಧ ಗಂಭೀರವಾಗಿ ಗಾಯಗೊಂಡಿದ್ದು, ಆತನಿಗೆ ಸೇನೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.