ನಟ ಸಿ.ಆರ್ ಸಿಂಹ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಬೆಂಗಳೂರು: ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಹಿರಿಯ ಕಲಾವಿದ ಸಿ.ಆರ್ ಸಿಂಹ ಅವರ ಆರೋಗ್ಯ ಮತ್ತಷ್ಟು ಹದಗಟ್ಟಿದ್ದು, ಅವರನ್ನು ಗುರುವಾರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಪ್ರಾಸ್ಟೇಟ್ ಕ್ಯಾನ್ಸರ್ನಿಂದ ಬಳಲುತ್ತಿದ್ದ ಅವರು ಕಳೆದ 1 ವರ್ಷದಿಂದ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಆರೋಗ್ಯದಲ್ಲಿ ಏರುಪೇರಾಗಿದ್ದು, ಕೂಡಲೇ ಅವರನ್ನು ಬೆಂಗಳೂರಿನ ಜಯನಗರದ ರಾಗಿಗುಡ್ಡದ ಸೇವಾಶ್ರಮದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸ್ಯಾಂಡಲ್ವುಡ್ ನಟ ಶ್ರೀನಾಥ್ ಅವರ ಸೋದರರು ಆಗಿರುವ ಅವರು ಕನ್ನಡ ಚಲನಚಿತ್ರ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಕನ್ನಡದಲ್ಲಿ ಸುಮಾರು 150ಕ್ಕೂ ಹೆಚ್ಚು ಚಿತ್ರಗಳಲ್ಲಿ ಮನೋಜ್ಞವಾಗಿ ಅಭಿನಯಿಸಿದ್ದಾರೆ. ಅಲ್ಲದೆ ತಮ್ಮದೇ ನಿರ್ದೇಶನದಲ್ಲಿ ಅದ್ಭುತ ಚಿತ್ರಗಳನ್ನು ಕನ್ನಡಕ್ಕೆ ನೀಡಿದ್ದಾರೆ. ಅದರಲ್ಲಿ 'ಕಾಕನಕೋಟೆ' ಚಿತ್ರ ರಾಷ್ಟ್ರಮಟ್ಟದಲ್ಲಿ ಹಲವು ಪ್ರಶಸ್ತಿಗಳನ್ನು ಪಡೆದಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


