ವಾರೆಂಟ್ ರದ್ದಿಗೆ ಸುಬ್ರತೋ ರಾಯ್ 'ಸುಪ್ರೀಂ' ಗೆ ಮೊರೆ

ನವದೆಹಲಿ: ಬಂಧನದ ಭೀತಿ ಎದುರಿಸುತ್ತಿರುವ ಸಹಾರಾ ಮುಖ್ಯಸ್ಥ ಸುಬ್ರತೋ ರಾಯ್ ಅವರು ತಮ್ಮ ವಿರುದ್ಧ ಜಾರಿಯಾಗಿದ್ದ ಜಾಮೀನು ರಹಿತ ಬಂಧನ ವಾರೆಂಟ್ನ್ನು ರದ್ದುಪಡಿಸುವಂತೆ ಕೋರಿ ಗುರುವಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.
ಸಹರಾ ಸಂಸ್ಧೆಯ ಹೂಡಿಕೆದಾರರಿಗೆ ಷೇರು ಹಣ ಹಿಂದುರಿಗಿಸದ ಪ್ರಕರಣಕ್ಕೆ ಸಂಬಂಧಸಿದಂತೆ ವಿಚಾರಣೆಗೆ ಖುದ್ದು ಹಾಜರಾಗವಂತೆ ಸುಪ್ರೀಂಕೋರ್ಟ್ ಆದೇಶಿಸಿತ್ತು. ಆದರೆ ವಿಚಾರಣೆಗೆ ಸತತವಾಗಿ ಹಾಜರಾಗದ ಹಿನ್ನೆಲೆಯಲ್ಲಿ ಸುಬ್ರತೋ ರಾಯ್ ವಿರುದ್ಧ ಸುಪ್ರೀಂಕೋರ್ಟ್ ನಿನ್ನೆ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿತ್ತು. ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಪೊಲೀಸರು ಇಂದು ಸುಬ್ರತೋ ರಾಯ್ ಬಂಧಿಸಲು ಅವರ ನಿವಾಸಕ್ಕೆ ತೆರಳಿದ್ದರು.
ಬಂಧನದ ಭೀತಿ ಎದುರಿಸುತ್ತಿರುವ ಸುಬ್ರತೋ ರಾಯ್ ತಮ್ಮ ವಿರುದ್ಧ ಜಾರಿ ಮಾಡಿರುವ ವಾರೆಂಟ್ನ್ನು ರದ್ದುಪಡಿಸುವಂತೆ ಕೋರಿ ಸುಪ್ರೀಂಕೋರ್ಟ್ಗೆ ಮನವಿ ಮಾಡಿದ್ದಾರೆ.
ಬರಿಗೈಲಿ ವಾಪಸ್ಸಾದ ಪೊಲೀಸರು
ಸುಬ್ರತೋ ರಾಯ್ ಅವರನ್ನು ಬಂಧಿಸಿ ಮಾರ್ಚ್ 4 ರಂದು ಕೋರ್ಟ್ಗೆ ಹಾಜರುಪಡಿಸುವಂತೆ ಪೊಲೀಸರಿಗೆ ಕಟ್ಟುನಿಟ್ಟಿನ ಆದೇಶ ಮಾಡಿತ್ತು. ಈ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಪೊಲೀಸರು ಲಖನೌನಲ್ಲಿರುವ ಸುಬ್ರತೋ ರಾಯ್ರ ನಿವಾಸಕ್ಕೆ ಇಂದು ತೆರಳಿದ್ದರು. ಆದರೆ ರಾಯ್ ಅವರು ಮನೆಯಲ್ಲಿ ಇರದಿದ್ದ ಕಾರಣ ಬರಿಗೈಯಲ್ಲಿ ವಾಪಸಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


