ಜೋಷಿ ರಾಜಿನಾಮೆ ಅಂಗೀಕಾರಕ್ಕು ಮುನ್ನ ಪ್ರಧಾನಿ ಭೇಟಿ: ಆಂಟನಿ

ನವದೆಹಲಿ: ಪದೇ ಪದೇ ಜಲಾಂತರ್ಗಾಮಿ ನೌಕೆಗಳು ದುರಂತಕ್ಕೀಡಾಗುತ್ತಿರುವ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ನೌಕದಳದ ಮುಖ್ಯಸ್ಥ ಡಿ.ಕೆ. ಜೋಷಿ ಅವರ ರಾಜಿನಾಮೆ ಅಂಗೀಕಾರದ ಬಗ್ಗೆ ಎದ್ದಿರುವ ಊಹಾಪೋಹಗಳಿಗೆ ರಕ್ಷಣಾ ಸಚಿವ ಎ.ಕೆ. ಆಂಟನಿ ಅವರು ಗುರುವಾರ ಸ್ಪಷ್ಟನೆ ನೀಡಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೌಕಾ ಸೇನಾಧಿಕಾರಿ ಜೋಷಿ ಅವರ ರಾಜಿನಾಮೆ ಅಂಗೀಕಾರಕ್ಕೂ ಮುನ್ನ ಪ್ರಧಾನಿ ಮನಮೋಹನ್ ಸಿಂಗ್ ಸೇರಿದಂತೆ ಎಲ್ಲರನ್ನೂ ಭೇಟಿ ಮಾಡಿರುವುದಾಗಿ ತಿಳಿಸಿದ್ದಾರೆ.
ಜೋಷಿ ಅವರು ರಾಜಿನಾಮೆಯನ್ನು ದಿಢೀರ್ ಸ್ವೀಕರಿಸಿದ್ದಕ್ಕಾಗಿ ನೌಕಾಪಡೆಯ ನಿವೃತ್ತ ಹಿರಿಯ ಅಧಿಕಾರಿಗಳಿಂದ ಟೀಕೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ನಾನು ಪ್ರಧಾನಿ ಸೇರಿದಂತೆ ಎಲ್ಲರ ಜೊತೆ ಸಮಾಲೋಚನೆ ನಡೆಸಿ ಕೊನೆಗೆ ರಾಜಿನಾಮೆ ಸ್ವೀಕರಿಸಲು ನಿರ್ಧರಿಸಿರುವುದಾಗಿ ಆಂಟನಿ ಹೇಳಿದ್ದಾರೆ.
ಸಿಂಧೂರತ್ನ ಸಬ್ಮೆರಿನ್ ನೌಕೆ ದುರಂತ ಹಿನ್ನೆಲೆಯಲ್ಲಿ ಜೋಷಿ ಅವರು ಖುದ್ದು ನನ್ನನ್ನು ಭೇಟಿಯಾಗಿ ರಾಜಿನಾಮೆ ನೀಡಿದ್ದರು. ಅಲ್ಲದೆ ತಮ್ಮ ರಾಜಿನಾಮೆಯನ್ನು ತಕ್ಷಣವೇ ಅಂಗೀಕರಿಸುವಂತೆ ಮನವಿ ಮಾಡಿದ್ದರು ಎಂದು ಆಂಟನಿ ತಿಳಿಸಿದ್ದಾರೆ.
ಏತನ್ಮಧ್ಯೆ, ಆಡ್ಮಿರಲ್ ಜೋಷಿ ಅವರನ್ನು ಹೊಗಳಿರುವ ಆಂಟನಿ, ಅತ್ಯುತ್ತಮ ಅಡ್ಮಿರಲ್ ಹಾಗೂ ಒಳ್ಳೆಯ ವ್ಯಕ್ತಿ ಎಂದು ಹೇಳಿದ್ದಾರೆ. ಅಲ್ಲದೆ ತಮ್ಮ ಸ್ಥಾನಕ್ಕೆ ನೌಕಾ ಪಡೆಯ ಉಪ ಮುಖ್ಯಸ್ಥ ವೈಸ್ ಅಡ್ಮಿರಲ್ ರಾಬಿನ್ ಧೋವನ್ ಅವರನ್ನು ಹಂಗಾಮಿ ಮುಖ್ಯಸ್ಥರನ್ನಾಗಿ ಮಾಡುವಂತೆ ಸಲಹೆ ನೀಡಿದ್ದರು ಎಂದು ಆಂಟನಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


