ಈಗಿನ ಸುದ್ದಿ

ಮೋದಿ ಬಗ್ಗೆ ಖುರ್ಷಿದ್ ಹೇಳಿಕೆಗೆ ರಾಹುಲ್ ಅಸಮಾಧಾನ

ಮೋದಿ ಬಗ್ಗೆ ಖುರ್ಷಿದ್ ಹೇಳಿಕೆಗೆ ರಾಹುಲ್ ಅಸಮಾಧಾನ
Published On :

ನವದೆಹಲಿ: ಗುಜರಾತ್ ಮುಖ್ಯಮಂತ್ರಿ ಹಾಗೂ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವ ಸಲ್ಮಾನ್ ಖುರ್ಷಿದ್ ನೀಡಿದ್ದ 'ನಪುಂಸಕ' ಹೇಳಿಕೆಗೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಎರಡು ದಿನಗಳ ಬಳಿಕ ಖುರ್ಷಿದ್ ಹೇಳಿಕೆ ಬಗ್ಗೆ ಇಂದು ವರದಿಗಾರರಿಗೆ ಪ್ರತಿಕ್ರಿಯಿಸಿರುವ ರಾಹುಲ್, 'ಇಂತಹ ಭಾಷೆ ಬಳಸುವುದನ್ನು ನಾನು ಒಪ್ಪಿಕೊಳ್ಳುವುದಿಲ್ಲ' ಎಂದಿದ್ದಾರೆ.

2002ರ ಗುಜರಾತ್ ಗಲಭೆ ನಿಯಂತ್ರಿಸಲು ಸಾಧ್ಯವಾಗದ ಮೋದಿ ಒಬ್ಬ 'ನಪುಂಸಕ' ಎಂದು ಸಲ್ಮಾನ್ ಖರ್ಷಿದ್ ಹೇಳಿದ್ದರು.

ಈ ಮಧ್ಯೆ, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಖುರ್ಷಿದ್ ಹೇಳಿಕೆ ಬಗ್ಗೆ ಪಕ್ಷದ ನಿಲುವು ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಆ ಬಗ್ಗೆ ತಾವು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಕೇಂದ್ರ ಸಚಿವ ಮನಿಶ್ ತಿವಾರಿ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.