ಈಗಿನ ಸುದ್ದಿ

ಸಹಾರಾ ಮುಖ್ಯಸ್ಥ ಸುಬ್ರತೋ ರಾಯ್ ಬಂಧನ?

ಸಹಾರಾ ಮುಖ್ಯಸ್ಥ ಸುಬ್ರತೋ ರಾಯ್ ಬಂಧನ?
Published On :

ಲಖನೌ: ಸಹಾರಾ ಮುಖ್ಯಸ್ಥ ಸುಬ್ರತೋ ರಾಯ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಯಾದ ಹಿನ್ನೆಲೆಯಲ್ಲಿ ಯಾವುದೇ ಕ್ಷಣದಲ್ಲೂ ಪೊಲೀಸರು ಅವರನ್ನು ಬಂಧಿಸುವ ಸಾಧ್ಯತೆಗಳಿವೆ.

ಸಹರಾ ಸಂಸ್ಧೆಯ ಹೂಡಿಕೆದಾರರಿಗೆ ಷೇರು ಹಣ ಹಿಂದುರಿಗಿಸದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಬ್ರತೋ ರಾಯ್ ವಿರುದ್ಧ ನಿನ್ನೆ ಸುಪ್ರೀಂಕೋರ್ಟ್ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಪೊಲೀಸರು ಲಖನೌನಲ್ಲಿರುವ ಸುಬ್ರತೋ ರಾಯ್‌ರ ನಿವಾಸಕ್ಕೆ ತಲುಪಿದ್ದು, ಅವರೊಂದಿಗೆ ಚರ್ಚಿಸುತ್ತಿದ್ದಾರೆ.

ಪ್ರಕರಣಕ್ಕೆ ಸಂಬಂಧಸಿದಂತೆ ವಿಚಾರಣೆಗೆ ಖುದ್ದು ಹಾಜರಾಗವಂತೆ ಕೋರ್ಟ್ ಆದೇಶಿಸಿತ್ತು. ಆದರೆ ವಿಚಾರಣೆಗೆ ಸತತವಾಗಿ ಹಾಜರಾಗದ ಹಿನ್ನೆಲೆಯಲ್ಲಿ ಸುಬ್ರತೋ ರಾಯ್ ವಿರುದ್ಧ ಸುಪ್ರೀಂಕೋರ್ಟ್ ನಿನ್ನೆ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿತ್ತು.

ಸಹರಾ ಸಂಸ್ಥೆಯ ಸಾವಿರಾರು ಷೇರುದಾರರ ಹಣ ವಾಪಾಸ್ ನೀಡದ ಪ್ರಕರಣ ಸಂಬಂಧ ಈ ಹಿಂದೆ ಸಹಾರಾ ಸಂಸ್ಥೆಯ ಮೂವರು ನಿರ್ದೇಶಕರಿಗೆ ಮತ್ತು ಸಹರಾ ಅಧೀನದ ಎರಡು ಕಂಪನಿಗಳಿಗೆ ಸುಪ್ರೀಂಕೋರ್ಟ್ ಸಮನ್ಸ್ ಜಾರಿ ಮಾಡಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.