ನಕ್ಸಲ್ ಕಾರ್ಯಾಚರಣೆ: 6 ಪೊಲೀಸರ ಸಾವು, ಹಲವರಿಗೆ ಗಾಯ

ರಾಯಪುರ: ಛತ್ತೀಸ್‌ಗಡದ ದಂತೇವಾಡದಲ್ಲಿ ಮತ್ತೆ ನಕ್ಸಲರು ಅಟ್ಟಹಾಸ ಮೆರೆದಿದ್ದು, ಆರು ಮಂದಿ ಪೊಲೀಸರನ್ನು ಹತ್ಯೆ ಮಾಡಿದ್ದಾರೆ.
ದಂತೇವಾಡದ ದಟ್ಟ ಅಡವಿಯಲ್ಲಿ ನಕ್ಸಲರ ಅಡುಗುದಾಣದ ಕುರಿತು ಮಾಹಿತಿ ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿದರು. ಆದರೆ ಹೆಚ್ಚಿನ ಸಂಖ್ಯೆಯಲ್ಲಿದ್ದ ನಕ್ಸಲರು ಪೊಲೀಸರ ಮೇಲೆ ಗುಂಡಿನ ಸುರಿಮಳೆ ಗೈದು 6 ಮಂದಿ ಪೊಲೀಸರನ್ನು ಹತ್ಯೆ ಮಾಡಿದ್ದಾರೆ.
ಲೋಕಸಭಾ ಚುನಾವಣೆ ವೇಳೆ ವಿದ್ವಂಸಕ ಕೃತ್ಯವೆಸಗಲು ಯತ್ನಿಸಿದ್ದ ನಕ್ಸಲರು ಈ ಹಿಂದಿನಂತೆ ಎಲ್ಲಿ ತಮ್ಮ ಉಪಾಯ ಪೊಲೀಸರಿಗೆ ಸೋರಿಕೆಯಾಗುತ್ತದೆ ಎಂದು ಹೆದರಿ, ದಂತೇವಾಡ ಸಮೀಪದ ಗ್ರಾಮಗಳಲ್ಲಿ ನೆಲೆಸಿದ್ದರು. ಅಲ್ಲದೆ ಗ್ರಾಮದ ನಿವಾಸಿಗಳ ಮೇಲೆ ತೀವ್ರ ನಿಗಾವಹಿಸಿ ಮೊಬೈಲ್ ಫೋನ್‌ಗಳನ್ನು ಬಳಕೆ ಮಾಡುತ್ತಿರುವ ಗ್ರಾಮಸ್ಥರ ಕುರಿತು ಮಾಹಿತಿ ಕಲೆಹಾಕುತ್ತಿದ್ದರು. ಆದರೆ ಅಷ್ಟರಲ್ಲಾಗಿಯೇ ಪೊಲೀಸರು ದಾಳಿ ನಡೆಸಿದ್ದು, 6 ಮಂದಿ ಪೊಲೀಸರು ಹತರಾಗಿದ್ದಾರೆ. ಈ ಕಾರ್ಯಾಚರಣೆಯಲ್ಲಿ ನಕ್ಸಲರ ಸಾವುನೋವಿನ ಕುರಿತು ವರದಿಯಾಗಿಲ್ಲ.
ಗ್ರಾಮಸ್ಥರ ಪ್ರಕಾರ ಕೆಲ ಸ್ಥಳೀಯ ನಕ್ಸಲ್ ನಾಯಕರು ಮೊಬೈಲ್ ಫೋನ್ ಬಳಕೆ ಮಾಡುವ ಗ್ರಾಮಸ್ಥರು ತಮ್ಮ ತಮ್ಮ ಫೋನ್‌ಗಳನ್ನು ತಮಗೊಪ್ಪಿಸಬೇಕು. ಚುನಾವಣೆ ಬಳಿಕ ನಾವೇ ಅವುಗಳನ್ನು ನಿಮಗೆ ವಾಪಾಸ್ ಮಾಡುವುದಾಗಿ ಹೇಳಿದ್ದರು ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


