ಸಹಾರಾ ಮುಖ್ಯಸ್ಥ ಸುಬ್ರತಾ ರಾಯ್ ಬಂಧನ

ನವದೆಹಲಿ: ಸಹಾರಾ ಸಂಸ್ಥೆಯ ಮುಖ್ಯಸ್ಥ ಸುಬ್ರತಾ ರಾಯ್ ಅವರನ್ನು ಲಖನೌ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ಕಳೆದ ಬುಧವಾರ ರಾಯ್ನನ್ನು ಬಂಧಿಸುವಂತೆ ಸುಪ್ರೀಂ ಕೋರ್ಟ್ ಜಾಮೀನು ರಹಿತ ವಾರಂಟ್ ಜಾರಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಇಂದು ಲಖನೌ ಪೊಲೀಸರನ್ನು ಅವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಹೂಡಿಕೆದಾರರಿಗೆ 20 ಸಾವಿರ ಕೋಟಿ ರುಪಾಯಿ ಮರುಪಾವತಿ ಮಾಡದ ಪ್ರಕರಣ ಸಂಬಂಧ ಕೋರ್ಟ್ ಮುಂದೆ ಹಾಜರಾಗುವಲ್ಲಿ ವಿಫಲರಾಗಿದ್ದ ರಾಯ್ನನ್ನು ಬಂಧಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು.
ರಾಯ್ರನ್ನು ಬಂಧಿಸಿ ಮಾರ್ಚ್ 4ರ ಮಧ್ಯಾಹ್ನ 2 ಗಂಟೆಗೆ ಕೋರ್ಟ್ಗೆ ಹಾಜರುಪಡಿಸಿ ಎಂದು ನ್ಯಾಯಮೂರ್ತಿ ಕೆ.ಎಸ್. ರಾಧಾಕೃಷ್ಣನ್ ಹಾಗೂ ಜೆ.ಎಸ್. ಖೆಹರ್ ಅವರನ್ನೊಳಗೊಂಡ ನ್ಯಾಯಪೀಠ ಪೊಲೀಸರಿಗೆ ಆದೇಶ ನೀಡಿತ್ತು.
ತನ್ನ 92 ವರ್ಷದ ತಾಯಿ ಅನಾರೋಗ್ಯಪೀಡಿತರಾಗಿದ್ದಾರೆ. ಹಾಗಾಗಿ ಖುದ್ದು ಕೋರ್ಟ್ಗೆ ಹಾಜರಾಗುವಲ್ಲಿ ವಿನಾಯಿತಿ ನೀಡಬೇಕೆಂದು ಕೋರಿ ರಾಯ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ತಿರಸ್ಕರಿಸಿತ್ತು. ರಾಯ್ ಗೈರುಹಾಜರಿಯ ಕಾರಣಗಳನ್ನು ಹಿರಿಯ ವಕೀಲ ರಾಮ್ ಜೇಠ್ಮಲಾನಿ ಅವರು ವಿವರಿಸಿದರು. ಆದರೂ ಒಪ್ಪದ ಕೋರ್ಟ್, ಇದು ದೇಶದ ಸರ್ವೋಚ್ಚ ನ್ಯಾಯಾಲಯ. ಈ ನ್ಯಾಯಾಲಯದ ಬಾಹುಗಳು ತುಂಬಾ ದೂರದವರೆಗೆ ವಿಸ್ತರಿಸಿದೆ. ನಿನ್ನೆಯೇ ರಾಯ್ ಕೋರಿಕೆಯನ್ನು ತಿರಸ್ಕರಿಸಲಾಗಿದೆ. ಹಾಗಾಗಿ ಅವರ ವಿರುದ್ಧ ಜಾಮೀನುರಹಿತ ವಾರಂಟ್ ಹೊರಡಿಸುತ್ತಿದ್ದೇವೆ ಎಂದಿತು.
ಸುಬ್ರತೋ ರಾಯ್ಗೆ ಮಾರ್ಚ್ 4ರವೆಗೆ ಪೊಲೀಸ್ ವಶಕ್ಕೆ
ಸುಬ್ರತೋ ರಾಯ್ ಅವರನ್ನು ಬಂಧಿಸಿದ್ದ ಪೊಲೀಸರು ಇಂದು ಅವರನ್ನ ಲಖನೌ ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಯಿತು. ಸತತ ಮೂರು ಗಂಟೆಗಳ ವಿಚಾರಣೆ ನಡೆಸಿದ ಲಖನೌ ನ್ಯಾಯಾಲಯ ಅವರನ್ನು ಮಾರ್ಚ್ 4ರವರಗೆ ಪೊಲೀಸ್ ಬಂಧನಕ್ಕೆ ನೀಡಿದೆ.
ಇದಕ್ಕೂ ಮೊದಲು ನಿನ್ನೆ ವಿಚಾರಣೆಗೆ ಹಾಜರಾಗದಿರುವ ಕುರಿತು ನ್ಯಾಯಾಲಯಕ್ಕೆ ಸ್ಪಷ್ಟನೆ ನೀಡಿದ ಸುಬ್ರತೋ ರಾಯ್ ಅವರು, ತಮ್ಮ 92 ವರ್ಷದ ತಾಯಿ ಅನಾರೋಗ್ಯಕ್ಕೀಡಾಗಿದ್ದರು. ಹೀಗಾಗಿ ನಾನು ಅವರ ಮೇಲ್ವಿಚಾರಣೆ ನೋಡಿಕೊಳ್ಳುತ್ತಿದ್ದರಿಂದ ನಿನ್ನೆಯ ವಿಚಾರಣೆಗೆ ಹಾಜರಾಗಲು ಸಾಧ್ಯವಾಗಲಿಲ್ಲ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


