ಆಂಧ್ರದಲ್ಲಿ ರಾಷ್ಟ್ರಪತಿ ಆಡಳಿತ: ಕೇಂದ್ರ ಸಂಪುಟದ ಒಪ್ಪಿಗೆ

ನವದೆಹಲಿ: ಆಂಧ್ರಪ್ರದೇಶ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರಲು ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಶುಕ್ರವಾರ ತೀರ್ಮಾನಿಸಲಾಗಿದೆ.
ಶುಕ್ರವಾರ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿವಾಸದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಆಂಧ್ರ ಪ್ರದೇಶ ವಿಧಾನಭೆಯನ್ನು ಅಮಾನತ್ತಿನಲ್ಲಿಟ್ಟು, ರಾಷ್ಟ್ರಪತಿ ಆಡಳಿತ ಹೇರುವ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ. ಸಭೆಯಲ್ಲಿ ಪ್ರಧಾನಿ ಮನಮೋಹನ್ ಸಿಂಗ್, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ ಮತ್ತು ದಿಗ್ವಿಜಯ್ ಸಿಂಗ್ ಸೇರಿದಂತೆ ಹಲವು ಸಚಿವರು ಪಾಲ್ಗೊಂಡಿದ್ದರು.
ಕಳೆದ ಫೆಬ್ರವರಿ 19ರಂದು ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ ಅವರು ತೆಲಂಗಾಣ ರಾಜ್ಯ ರಚನೆಯನ್ನು ವಿರೋಧಿಸಿ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಅವರೊಂದಿಗೆ ಕೆಲ ಬೆಂಬಲಿಗ ಸಚಿವ ಮತ್ತು ಶಾಸಕರು ಸಹ ರಾಜಿನಾಮೆ ಸಲ್ಲಿಸಿದ್ದರು. ಅದರೊಂದಿಗೆ ಆಡಳಿತ ರೂಢ ಕಾಂಗ್ರೆಸ್ ಪಕ್ಷ ಅಲ್ಪಮತಕ್ಕೆ ಕುಸಿದಿತ್ತು. ಹೀಗಾಗಿ ಆಂಧ್ರ ಪ್ರದೇಶ ರಾಜ್ಯಪಾಲರಾದ ಇಎಸ್‌ಎಲ್ ನರಸಿಂಹನ್ ಅವರು ಆಂಧ್ರ ಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತ ಹೇರುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದರು.
ಆಂಧ್ರ ಪ್ರದೇಶದಲ್ಲಿ ಕೊನೆಯ ಬಾರಿಗೆ ಅಂದರೆ 1973ರಲ್ಲಿ ಪಿ.ವಿ.ನರಸಿಂಹರಾವ್ ಅವರು ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ರಾಷ್ಟ್ರಪತಿ ಆಡಳಿತ ಹೇರಲಾಗಿತ್ತು. ಮೂರು ದಶಕಗಳ ಬಳಿಕ ಆಂಧ್ರ ಪ್ರದೇಶದಲ್ಲಿ ಮತ್ತೆ ರಾಷ್ಟ್ರಪತಿ ಆಡಳಿತ ಹೇರಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


