ಈಗಿನ ಸುದ್ದಿ

ತೆಲಂಗಾಣ ವಿಧೇಯಕಕ್ಕೆ ರಾಷ್ಟ್ರಪತಿಗಳ ಅಂಕಿತ

ತೆಲಂಗಾಣ ವಿಧೇಯಕಕ್ಕೆ ರಾಷ್ಟ್ರಪತಿಗಳ ಅಂಕಿತ
Published On :

ನವದೆಹಲಿ: ಆಂಧ್ರ ಪ್ರದೇಶವನ್ನು ವಿಭಜಿಸಿ ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆ ಮಾಡುವ ವಿಧೇಯಕಕ್ಕೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಶನಿವಾರ ಅಂಕಿತ ಹಾಕಿದ್ದಾರೆ.

ಸಂಸತ್ತಿನ ಉಭಯ ಕಲಾಪಗಳಲ್ಲಿ ಭಾರಿ ಗದ್ದಲಕ್ಕೆ ಕಾರಣವಾಗಿದ್ದ ನೂತನ ತೆಲಂಗಾಣ ರಾಜ್ಯ ರಚನೆ ವಿಧೇಯಕಕ್ಕೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಸಹಿ ಹಾಕಿದ್ದು, ಅಧಿಕೃತವಾಗಿ ದೇಶದ 29ನೇ ರಾಜ್ಯವಾಗಿ ತೆಲಂಗಾಣ ಉದಯವಾಗಿದೆ.

ಫೆಬ್ರವರಿ 18ರಂದು ನಡೆದ ಲೋಕಸಭೆ ಕಲಾಪದಲ್ಲಿ ಅನುಮೋದನೆ ಪಡೆದಿದ್ದ ವಿಧೇಯಕಕ್ಕೆ ಕೊಂಚ ತಡವಾಗಿ ರಾಜ್ಯಸಭೆಯಲ್ಲಿ ಅಂಗೀಕಾರ ನೀಡಲಾಗಿತ್ತು. ಸೀಮಾಂಧ್ರ ಸಂಸದರ ತೀವ್ರ ವಿರೋಧದ ನಡುವೆಯೂ ರಾಜ್ಯಸಭೆಯಲ್ಲಿ ಧ್ವನಿಮತದ ಮೂಲಕ ವಿಧೇಯಕವನ್ನು ಅಂಗೀಕರಿಸಲಾಗಿತ್ತು. ಇದೀಗ ರಾಷ್ಟ್ರಪತಿ ಅವರ ಸಹಿಯೊಂದಿಗೆ ಅಧಿಕೃತವಾಗಿ ದೇಶದ 29ನೇ ರಾಜ್ಯವಾಗಿ ತೆಲಂಗಾಣ ಉದಯಿಸಿದಂತಾಗಿದೆ.

ಈಗಾಗಲೇ ವಿಭಜನೆ ಕಾರ್ಯ ಆರಂಭಿಸಿರುವ 'ಕೇಂದ್ರ'
ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಈಗಾಗಲೇ ತೆಲಂಗಾಣ ಮತ್ತು ಆಂಧ್ರ ಪ್ರದೇಶ ರಾಜ್ಯಗಳ ವಿಭಜನೆಯಲ್ಲಿ ತೊಡಗಿದೆ. ಇದಕ್ಕಾಗಿ ಪ್ರಾಥಮಿಕ ಭಾಗವಾಗಿ 2 ಸಮಿತಿಗಳನ್ನು ರಚಿಸಿರುವ ಕೇಂದ್ರ ಸರ್ಕಾರ, ಒಂದು ಸಮಿತಿಗೆ ಭಾರತೀಯ ನಾಗರೀಕ ಸೇವಾ ಅಧಿಕಾರಿಗಳನ್ನು ಮತ್ತು ಮತ್ತೊಂದು ಸಮಿತಿಗೆ ರಾಜ್ಯ ಮಟ್ಟದ ಅಧಿಕಾರಿಗಳನ್ನು ಹಂಚುವ ಜವಾಬ್ದಾರಿ ನೀಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.