ಈಗಿನ ಸುದ್ದಿ

ಬಿಜೆಪಿ ಅಧಿಕಾರಕ್ಕೆ ಬಂದರೆ ಬದಲಾವಣೆಯಾಗದು: ಕೇಜ್ರಿವಾಲ್

ಬಿಜೆಪಿ ಅಧಿಕಾರಕ್ಕೆ ಬಂದರೆ ಬದಲಾವಣೆಯಾಗದು: ಕೇಜ್ರಿವಾಲ್
Published On :

ಘಾಜಿಯಾಬಾದ್: ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬಂದರೆ ದೇಶದಲ್ಲಿ ಯಾವುದೇ ಮಹತ್ತರ ಬದಲಾವಣೆಗಳಾಗದು ಎಂದು ಆಮ್ ಆದ್ಮಿ ಪಕ್ಷದ ಮುಖಂಡ ಅರವಿಂದ್ ಕೇಜ್ರಿವಾಲ್ ಅವರು ಹೇಳಿದ್ದಾರೆ.

ಇಂದು ಉತ್ತರ ಪ್ರದೇಶದಲ್ಲಿ 3 ದಿನಗಳ ರೋಡ್ ಶೋ ಪ್ರಚಾರ ಕಾರ್ಯಕ್ರಮವನ್ನು ಆರಂಭಿಸಿರುವ ಅವರು, ಬಿಜೆಪಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು. ಲೋಕಸಭಾ ಚುನಾವಣೆಯ ಮೇಲೆ ಕಣ್ಣಿಟ್ಟಿರುವ ಆಮ್ ಆದ್ಮಿ ಪಕ್ಷ ಅರವಿಂದ್ ಕೇಜ್ರಿವಾಲ್ ಅವರ ನೇತೃತ್ವದಲ್ಲಿ ಉತ್ತರ ಪ್ರದೇಶದಾದ್ಯಂತ ಒಟ್ಟು 500 ಕಿ.ಮೀ ವ್ಯಾಪ್ತಿಯಲ್ಲಿ ಸತತ 3 ದಿನಗಳ ಕಾಲ ಪ್ರಚಾರ ನಡೆಸಲಿದೆ. ಘಾಜಿಯಾ ಬಾದ್ ಖೌಸಂಬಿಯಲ್ಲಿರುವ ಆಪ್ ಕಚೇರಿಯಿಂದ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ರ್ಯಾಲಿಯನ್ನು ಆರಂಭಿಸಿದರು.

ಈ ವೇಳೆ ಮಾತನಾಡಿದ ಕೇಜ್ರಿವಾಲ್ ಅವರು, ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ದೇಶದಲ್ಲಿ ಯಾವುದೇ ಬದಲಾವಣೆಗಳು ಆಗುವುದಿಲ್ಲ. ದೇಶದ ಜನತೆ ಮತ್ತದೇ ಭ್ರಷ್ಟಾಚಾರದ ಕೂಪಕ್ಕೆ ಸಿಲುಕಿ ನರಳ ಬೇಕಾಗುತ್ತದೆ. ಭ್ರಷ್ಟಾಚಾರ, ಬೆಲೆ ಏರಿಕೆ ಮತ್ತು ಕೋಮುವಾದಗಳೇ ನಮ್ಮ ಶತ್ರುಗಳಾಗಿದ್ದು, ಅವುಗಳನ್ನು ಬಡುಸಮೇತ ಕಿತ್ತೊಗೆಯುವುದು ನಮ್ಮ ಗುರಿಯಾಗಿದೆ. ಆದರೆ ಈ ಸಮಸ್ಯೆಗಳ ಬಗ್ಗೆ ದೇಶದ ಇತರೆ ಪಕ್ಷಗಳು ಹೊರಾಡುತ್ತಿಲ್ಲ ಎಂದು ಹೇಳಿದರು.

ನಂತರ ಮಾತನಾಡಿದ ಆಪ್ನ ಮತ್ತೋರ್ವ ಮುಖಂಡ ಮನೀಷ್ ಸಿಸೋಡಿಯಾ ಅವರು, ಉತ್ತರ ಪ್ರದೇಶದಲ್ಲಿ ಜಾತಿ ಮತ್ತು ಧರ್ಮಗಳ ರಾಜಕೀಯ ಪ್ರಬಲವಾಗಿದೆ. ನಾವು ಇದಕ್ಕೆ ಪ್ರತಿಯಾಗಿ  ಅಭಿವೃದ್ದಿಯ ರಾಜಕೀಯ ಮಾಡುತ್ತೇವೆ. ಅಭಿವೃದ್ದಿಯಲ್ಲಿ ಉತ್ತರ ಪ್ರದೇಶ ಸಾಕಷ್ಟು ಹಿಂದುಳಿದ ರಾಜ್ಯವಾಗಿದ್ದು, ರಾಜ್ಯದಲ್ಲಿ ಸಾಕಷ್ಟು ಸಮಸ್ಯೆಗಳು ಜನತೆಯನ್ನು ಕಾಡುತ್ತಿದೆ ಎಂದು ಹೇಳಿದರು.

ಅರವಿಂದ್ ಕೇಜ್ರಿವಾಲ್ ಅವರ ಪ್ರಸ್ತುತ ನಿವಾಸವಿರುವುದು ಉತ್ತರ ಪ್ರದೇಶದ ಘಾಜಿಯಾಬಾದಿನಲ್ಲಿ. ಹೀಗಾಗಿ ತಮ್ಮ ತವರು ರಾಜ್ಯದ ಮೇಲೆ ಕಣ್ಣಿಟ್ಟಿರುವ ಕೇಜ್ರಿವಾಲ್ ಅವರು 3 ದಿನಗಳ ರೋಡ್ ಶೋ ಆರಂಭಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಒಟ್ಟು 15 ಲೋಕಸಭಾ ಸ್ಥಾನಗಳಿದ್ದು, ಎಲ್ಲ ಕ್ಷೇತ್ರಗಳಲ್ಲಿಯೂ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ಆಪ್ ಘೋಷಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.