ಈಗಿನ ಸುದ್ದಿ

ರಾಜೀವ್ ಹಂತಕರ ಶಿಕ್ಷೆ ಪ್ರಮಾಣ ಕಡಿತ ಬೇಡ: ಸುಪ್ರೀಂಗೆ ಕೇಂದ್ರ ಮನವಿ

ರಾಜೀವ್ ಹಂತಕರ ಶಿಕ್ಷೆ ಪ್ರಮಾಣ ಕಡಿತ ಬೇಡ: ಸುಪ್ರೀಂಗೆ ಕೇಂದ್ರ ಮನವಿ
Published On :

ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಂತಕರಿಗೆ ನೀಡಲಾಗಿದ್ದ ಮರಣದಂಡನೆ ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸಿರುವ ಸುಪ್ರೀಂಕೋರ್ಟ್ ತನ್ನ ತೀರ್ಪನ್ನು ಪುನರ್ ಪರಾಮರ್ಶಿಸುವಂತೆ ಕೇಂದ್ರ ಸರ್ಕಾರ ಶನಿವಾರ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

ರಾಜೀವ್ ಗಾಂಧಿ ಅವರನ್ನು ಹತ್ಯೆಗೈದು ಪ್ರಸ್ತುತ ತಮಿಳುನಾಡಿನ ವೆಲ್ಲೂರು ಜೈಲಿನಲ್ಲಿರುವ ಮುರುಗನ್, ಪೆರಾರಿಯನ್, ಸಂತನ್ ಗಲ್ಲು ಶಿಕ್ಷೆಯನ್ನು ಕೆಲ ದಿನಗಳ ಹಿಂದೆ ಸುಪ್ರೀಂಕೋರ್ಟ್ ಜೀವಾವಧಿ ಶಿಕ್ಷೆಗೆ ಪರಿವರ್ತಿಸಿತ್ತು.

ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇಂದು ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದು, ರಾಜೀವ್ ಹಂತಕರ ಶಿಕ್ಷೆಯ ಪ್ರಮಾಣವನ್ನು ಕಡಿತಗೊಳಿಸುವುದು ಬೇಡ ಎಂದು ಕೇಂದ್ರ ಸಾರ್ಕರ ಮುಖ್ಯ ನ್ಯಾಯಮೂರ್ತಿ ಪಿ. ಸದಾಶಿವಂ ಅವರ ಪೀಠಕ್ಕೆ ಮನವಿ ಮಾಡಿದೆ.

ಗಲ್ಲು ಶಿಕ್ಷೆ ಜಾರಿಗೊಳಿಸುವಲ್ಲಿ ವಿಳಂಬವಾದ ಹಿನ್ನೆಲೆಯಲ್ಲಿ ಅದನ್ನು ಜೀವಾವಧಿ ಶಿಕ್ಷೆಯಯಾಗಿ ಪರಿವರ್ತಿಸುವುದರಿಂದ ದೇಶಕ್ಕೆ ತಪ್ಪು ಸಂದೇಶ ನೀಡಿದಂತಾಗುತ್ತದೆ ಎಂದು ಕೇಂದ್ರ ಸರ್ಕಾರ ತನ್ನ ಮೇಲ್ಮನವಿಯಲ್ಲಿ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.