ಈಗಿನ ಸುದ್ದಿ

ರಾಹುಲ್ ಗಾಂಧಿ ಭೇಟಿ ಮಾಡಲು ಬಯಸಿದ್ದ ಮಹಿಳೆ ಹತ್ಯೆ

ರಾಹುಲ್ ಗಾಂಧಿ ಭೇಟಿ ಮಾಡಲು ಬಯಸಿದ್ದ ಮಹಿಳೆ ಹತ್ಯೆ
Published On :

ಜೋರ್‌ಹತ್(ಅಸ್ಸಾಂ): ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲು ಬಯಸಿದ್ದ ಮಹಿಳೆಯನ್ನು ಆಕೆಯ ಪತಿಯೇ ಬೆಂಕಿ ಹಚ್ಚಿ ಹತ್ಯೆ ಮಾಡಿ, ಬಳಿಕ ತಾನು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶನಿವಾರ ಅಸ್ಸಾಂನ ಜೋರ್‌ಹತ್‌ನಲ್ಲಿ ನಡೆದಿದೆ.

ಕಳೆದ ಬುಧವಾರ ಅಸ್ಸಾಂನ ಗುವಾಹಟಿಯಲ್ಲಿ ನಡೆದ ಸಂವಾದದ ವೇಳೆ ಬೋಂಟಿ ಚುಟಿಯಾ ಎಂಬ ಮಹಿಳೆ ರಾಹುಲ್ ಗಾಂಧಿ ಭೇಟಿ ಮಾಡಲು ಯತ್ನಿಸಿದ್ದಳು. ಇದನ್ನು ಸಹಿಸಿಕೊಳ್ಳದ ಆಕೆಯ ಪಾಪಿ ಪತಿ ತನ್ನ ಪತ್ನಿಯನ್ನು ಬೆಂಕಿ ಹಚ್ಚಿ ಕೊಂದು ತಾನು ಆತ್ಮಹತ್ಯೆಗೆ ಯತ್ನಿಸಿ, ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾನೆ.

ಈ ಸಂಬಂಧ ಜೋರ್‌ಹತ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

ಬೋಂಟಿ ಸಾವು ಅಸಹಜ ಎಂದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಮತ್ತು ಆಕೆಯ ಪತಿ ಸೋಮೇಶ್ವರ ಚುಟಿಯಾಗೂ ಶೇ.35ರಷ್ಚು ಸುಟ್ಟ ಗಾಯಗಳಾಗಿವೆ ಎಂದು ಜೋರ್‌ಹತ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಅಮನ್‌ಜೀತ್ ಕೌರ್ ಅವರು ತಿಳಿಸಿದ್ದಾರೆ. ಅಲ್ಲದೆ ಕೊಲೆಯಾದ ಮಹಿಳೆ ರಾಹುಲ್ ಗಾಂಧಿಗೆ ಮುತ್ತಿಟ್ಟ ಮಹಿಳೆ ಅಲ್ಲ ಎಂದು ಕೌರ್ ಸ್ಪಷ್ಟಪಡಿಸಿದ್ದಾರೆ.

ಈ ದಂಪತಿಗಳ ಮಧ್ಯೆ ಮೊದಲನಿಂದಲೂ ಕೌಟುಂಬಿಕ ಕಲಹವಿತ್ತೇ ಅಥವಾ ರಾಹುಲ್ ಗಾಂಧಿಗೆ ಭೇಟಿಗೆ ಯತ್ನಿಸಿದ್ದೇ ಮಹಿಳೆಯ ಹತ್ಯೆಗೆ ಕಾರಣವಾಯಿತೇ ಎಂಬುದರ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.