ಈಗಲು ನಮ್ಮದು ಶುದ್ಧ ಸಂಪುಟ: ಸಿದ್ದು ಸಮರ್ಥನೆ

ಬೆಂಗಳೂರು: ನಿನ್ನೆ ಸಂಪುಟಕ್ಕೆ ನೂತನ ಸಚಿವರಾಗಿ ಸೇರ್ಪಡೆಗೊಂಡ ಡಿ.ಕೆ. ಶಿವಕುಮಾರ್ ಮತ್ತು ಆರ್. ರೋಷನ್ ಬೇಗ್ ಅವರ ವಿರುದ್ಧ ಆರೋಪಗಳು ಇವೆಯಷ್ಟೇ. ಅವು ಸಾಬೀತಾಗಿಲ್ಲ. ಹೀಗಾಗಿ ನಮ್ಮದು ಈಗಲು ಶುದ್ಧ ಸಂಪುಟ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ತಮ್ಮ ಸಂಪುಟ ವಿಸ್ತರಣೆ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವರ ವಿರುದ್ಧ ಕೇವಲ ಆರೋಪಿಗಳಿವೆ ಅಷ್ಟೇ. ಅವು ಸಾಬೀತಾದರೆ ಅವರು ಅಪರಾಧಿಗಳಾಗುತ್ತಾರೆ. ಶಿವಕುಮಾರ್ ಮತ್ತು ರೋಷನ್‌ಬೇಗ್ ವಿರುದ್ಧ ಕೇವಲ ಆರೋಪಗಳು ದಾಖಲಾಗಿವೆ ಅಷ್ಟೇ ಎಂದು ಸಿದ್ದರಾಮಯ್ಯ ಅವರು ಹೇಳಿದ್ದು, ಈಗಲು ನಮ್ಮದು ಸ್ವಚ್ಛ ಸಂಪುಟ ಎಂದು ತಮ್ಮ ನಡೆಯನ್ನು ಸಮರ್ಥಿಕೊಂಡಿದ್ದಾರೆ.
ಸಚಿವರ ವಿರುದ್ಧ ಖಾಸಗಿ ದೂರುಗಳು ದಾಖಲಾಗಿವೆ. ಹೀಗಾಗಿ ಅವರು ಅಪರಾಧಿಗಳಲ್ಲ. ಅವರ ವಿರುದ್ಧದ ಆರೋಪಗಳು ಸಾಬೀತಾದ ನಂತರ ಅವರು ಅಪರಾಧಿಗಳಾಗುತ್ತಾರೆ ಎಂದು ಸಿದ್ದು ತಿಳಿಸಿದ್ದಾರೆ.
ಇದೇ ವೇಳೆ, ಮಾಜಿ ಪ್ರವಾಸೋದ್ಯಮ ಸಚಿವ ಸಂತೋಷ್ ಲಾಡ್ ವಿರುದ್ಧ ಆರೋಪಗಳು ಕೇಳಿಬಂದಿತ್ತು. ಇದರಿಂದಾಗಿ ಲಾಡ್ ಅವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ರಾಜಿನಾಮೆ ನೀಡುವಂತೆ ಲಾಡ್‌ಗೆ ನಾವು ಬಲವಂತ ಮಾಡಿರಲಿಲ್ಲ ಎಂದು ಸಿದ್ದು ತಿಳಿಸಿದ್ದಾರೆ.
ಕಳಂಕಿತ ಶಾಸಕರಿಗೆ ಸಂಪುಟದಲ್ಲಿ ಸ್ಥಾನ ನೀಡುವುದಿಲ್ಲ ಎಂಬ ಧೋರಣೆಯನ್ನು ಪ್ರತಿಪಾದಿಸುತ್ತಿದ್ದ ಸಿದ್ದರಾಮಯ್ಯ ಅವರು, ಹೈಕಮಾಂಡ್ ಆದೇಶಕ್ಕೆ ಮಣಿದು ನಿನ್ನೆ ತಮ್ಮ ಸಂಪುಟಕ್ಕೆ ಡಿ.ಕೆ. ಶಿವಕುಮಾರ್ ಮತ್ತು ಶಿವಾಜಿನಗರ ಶಾಸಕ ರೋಷನ್‌ಬೇಗ್ ಅವರನ್ನು ಸೇರಿಸಿಕೊಂಡಿದ್ದರು. ಡಿಕೆಶಿ ಮತ್ತು ಬೇಗ್ ವಿರುದ್ಧ ಹಲವು ಖಾಸಗಿ ದೂರುಗಳು ದಾಖಲಾಗಿವೆ. ಹೀಗಾಗಿ ಅವರಿಗೆ ಸಚಿವ ಸ್ಥಾನ ನೀಡಬಾರದು ಎಂಬ ಮಾತುಗಳು ಕೇಳಿ ಬಂದಿದ್ದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


