ಡಿಕೆಶಿಗೆ ಇಂಧನ, ಬೇಗ್ಗೆ ಮೂಲಸೌಕರ್ಯ, ಹಜ್ ಖಾತೆ

ಬೆಂಗಳೂರು: ನಿನ್ನೆಯಷ್ಟೇ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ. ಶಿವಕುಮಾರ್ ಹಾಗೂ ರೋಷನ್ಬೇಗ್ ಅವರಿಗೆ ಸಿಎಂ ಸಿದ್ದರಾಮಯ್ಯ ಅವರು ಗುರುವಾರ ಖಾತೆ ಹಂಚಿಕೆ ಮಾಡಿದ್ದಾರೆ.
ಸಿಎಂ ಬಳಿ ಉಳಿದುಕೊಂಡಿದ್ದ ಇಂಧನ ಖಾತೆಯನ್ನು ನಿರೀಕ್ಷೆಯಂತೆ ಡಿಕೆಶಿಯವರಿಗೆ ನೀಡಲಾಗಿದೆ. ಸಚಿವ ರೋಷನ್ಬೇಗ್ ಅವರಿಗೆ ಮೂಲಸೌಕರ್ಯ ಮತ್ತು ಹಜ್ ಖಾತೆಯನ್ನು ನೀಡಲಾಗಿದೆ. ಖಾತೆ ಹಂಚಿಕೆಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ಪ್ರಸ್ತಾವಣೆ ಸಲ್ಲಿಸಿದ್ದು, ಸಿದ್ದರಾಮಯ್ಯರ ಶಿಫಾರಸ್ಸಿಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.
ಸಚಿವ ಖಮರುಲ್ ಇಸ್ಲಾಂ ಅವರು ತಮ್ಮ ಬಳಿ ಇದ್ದ ಹಜ್ ಖಾತೆಯನ್ನು ಬಿಟ್ಟುಕೊಂಡಲು ನಿರಾಕರಿಸಿದ್ದರು. ಹಠ ಹಿಡಿದಿದ್ದ ಅವರನ್ನು ಸಮಾಧಾನಪಡಿಸಲು ಹಿರಿಯ ಸಚಿವ ಎಚ್.ಕೆ. ಪಾಟೀಲ್ ಅವರಿಗೆ ಸಿಎಂ ಸೂಚನೆ ನೀಡಿದ್ದರು. ಅದರಂತೆ ತಮ್ಮ ನಿವಾಸದಲ್ಲಿ ಖಮರುಲ್ ಜೊತೆ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಸಂಧಾನದ ಮಾತುಕತೆ ನಡೆಸಿದ ಎಚ್.ಕೆ. ಪಾಟೀಲ್ ಅದರಲ್ಲಿ ಯಶಸ್ವಿಯಾಗಿದ್ದರು.
ಖಾತೆ ಹಂಚಿಕೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಡಿ.ಕೆ. ಶಿವಕುಮಾರ್ ಅವರು, ಖಾತೆ ಹಂಚಿಕೆ ಸಿಎಂ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಬಿಟ್ಟ ವಿಚಾರ. ಆದರೆ ನನಗೆ ಯಾವುದೇ ಖಾತೆ ನೀಡಿದರು ಅದನ್ನು ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


