ವಿಶ್ವಾಸ ಮತಯಾಚನೆ ಪ್ರಸ್ತಾವನೆ ಮಂಡಿಸಿದ ಸಿಸೋಡಿಯಾ

ನವದೆಹಲಿ: ಕಾಂಗ್ರೆಸ್ನ ಬೇಷರತ್ತು ಬೆಂಬಲದಿಂದ ಅಧಿಕಾರದ ಗದ್ದುಗೆ ಏರಿರುವ ಆಮ್ ಆದ್ಮಿ ಪಕ್ಷ(ಎಎಪಿ)ಕ್ಕೆ ಗುರುವಾರ ಬಹುಮತ ಸಾಬೀತುಪಡಿಸುವ ಅನಿವಾರ್ಯತೆ ಇದ್ದು, ಇದಕ್ಕಾಗಿ ಎಎಪಿ ಸಚಿವ ಸಿಸೋಡಿಯಾ ಅವರು ವಿಶ್ವಾಸ ಮತಯಾಚನೆಗೆ ಪ್ರಸ್ತಾವನೆ ಮಂಡಿಸಿದ್ದಾರೆ.
ಇಂದು ವಿಧಾನಸಭೆಯಲ್ಲಿ ಮಾತನಾಡಿದ ಅವರು, ಪ್ರಸ್ತುತ ಚುನಾವಣೆಯಲ್ಲಿ ನಮಗೆ ಸಂಪೂರ್ಣ ಬಹುಮತ ಸಿಕ್ಕಿಲ್ಲ ಹೀಗಾಗಿ ವಿಶ್ವಾಸ ಮತಯಾಚನೆಯ ಪ್ರಸ್ತಾವನೆ ಸಲ್ಲಿಸುತ್ತಿರುವುದಾಗಿ ಸಿಸೋಡಿಯಾ ತಿಳಿಸಿದ್ದಾರೆ. ಈ ವೇಳೆ ಸರ್ಕಾರ ಮುನ್ನಡೆಸುವ ನೈತಿಕ ಜವಾಬ್ದಾರಿ ನಮ್ಮ ಮೇಲಿದೆ ಎಂದು ಹೇಳಿದರು.
ಎಎಪಿ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ನೀಡಿದ್ದ ಉಚಿತ ನೀರು ಹಾಗೂ ವಿದ್ಯುತ್ ದರ ಕಡಿತಕ್ಕೆ ಸಂಬಂಧಿಸಿದ ಭರವಸೆಯನ್ನು ಈಗಾಗಲೆ ಈಡೇರಿಸಲಾಗಿದೆ. ಅಲ್ಲದೆ ದೆಹಲಿಯಲ್ಲಿ ಸ್ವರಾಜ್ಯ ಕಾನೂನು ನಿರ್ಮಾಣ ಮಾಡುವ ಕನಸು ನಮ್ಮದು ಎಂದು ಸಿಸೋಡಿಯಾ ವಿಧಾನಸಭೆಗೆ ತಿಳಿಸಿದರು.
ಪ್ರಸ್ತುತ ವಿಧಾನಸಭಾ ಚುನಾವಣೆಯಲ್ಲಿ ಯಾವ ಪಕ್ಷಕ್ಕು ಸ್ಪಷ್ಟ ಬಹುಮತ ಸಿಕ್ಕದೆ ಅತಂತ್ರ ಸ್ಥಿತಿ ನಿರ್ಮಾಣವಾಗಿತ್ತು. ಆದರೆ ಕಾಂಗ್ರೆಸ್ನ ಬೇಷರತ್ತು ಬೆಂಬಲದ ಹಿನ್ನೆಲೆಯಲ್ಲಿ ಜನತೆಯ ಆದೇಶದ ಮೇರೆಗೆ ನಾವು ಸರ್ಕಾರ ರಚಿಸಿದ್ದೇವೆ ಎಂದು ಸಿಸೋಡಿಯಾ ಹೇಳಿದ್ದಾರೆ.
ದೆಹಲಿ ರಾಜ್ಯಪಾಲರು ಎಎಪಿ ಸರ್ಕಾರಕ್ಕೆ ಬಹುಮತ ಸಾಬೀತುಪಡಿಸಲು ಇಂದು ಅವಕಾಶ ನೀಡಿದ್ದರು. ಅದರಂತೆ ಎಎಪಿ ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚನೆಗೆ ಮುಂದಾಗಿದ್ದು, ಬೇಷರತ್ತು ಬೆಂಬಲ ನೀಡಿರುವ ಕಾಂಗ್ರೆಸ್ ಯಾವ ಧೋರಣೆ ತಾಳಲಿದೆ ಎಂಬುದು ಇನ್ನು ಕೆಲವೆ ಗಂಟೆಗಳಲ್ಲಿ ಬಹಿರಂಗವಾಗಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


