ಈಗಿನ ಸುದ್ದಿ

ಆದರ್ಶ ಹಗರಣದ ವರದಿ ಅಂಗೀಕರಿಸಿದ 'ಮಹಾ' ಸರ್ಕಾರ

ಆದರ್ಶ ಹಗರಣದ ವರದಿ ಅಂಗೀಕರಿಸಿದ 'ಮಹಾ' ಸರ್ಕಾರ
Published On :

ಮುಂಬೈ: ಆದರ್ಶ ಸೊಸೈಟಿ ಹಗರಣಕ್ಕೆ ಸಂಬಂಧಿಸಿದಂತೆ ತನಿಖಾ ಆಯೋಗ ಸಲ್ಲಿಸಿದ್ದ ವರದಿಯನ್ನು ಮಹಾರಾಷ್ಟ್ರ ಸರ್ಕಾರ ಗುರುವಾರ ಅಂಗೀಕರಿಸಿದೆ.

ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಆದರ್ಶ ಹೌಸಿಂಗ್ ಸೊಸೈಟಿ ಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಆಯೋಗ ಸಲ್ಲಿಸಿದ್ದ ತನಿಖಾ ವರದಿಯನ್ನು ಪುನರ್ ಪರಿಶೀಲಿಸಿ ಅಂಗೀಕರಿಸಲಾಗಿದೆ. ಇದಕ್ಕೂ ಮುನ್ನ ತನಿಖಾ ಆಯೋಗ ಸಲ್ಲಿಸಿದ ವರದಿಯನ್ನು ಮಹಾರಾಷ್ಟ್ರ ಸರ್ಕಾರ ತಿರಸ್ಕರಿಸಿತ್ತು. ಮಹಾ ಸರ್ಕಾರದ ಈ ನಿರ್ಧಾರಕ್ಕೆ ಕಾಂಗ್ರೆಸ್ ವರಿಷ್ಠರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು.

ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮಹಾರಾಷ್ಟ್ರ ಮುಖ್ಯಮಂತ್ರಿ ಪೃಥ್ವಿರಾಜ್ ಚಹಾಣ್ ಅವರು, ಆದರ್ಶ ಸೊಸೈಟಿ ಹಗರಣವನ್ನು ಇಂದಿನ ಸಚಿವ ಸಂಪುಟ ಸಭೆಯಲ್ಲಿ ಅಂಗೀಕರಿಸಲಾಗಿದೆ. ಆದರೆ ತನಿಖಾ ಆಯೋಗದ ವರದಿಯಲ್ಲಿ ಆರೋಪಿಸಿರುವ ಯಾವುದೇ ರಾಜಕಾರಣಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವುದಿಲ್ಲ ಎಂದು ಅವರು ತಿಳಿಸಿದ್ದಾರೆ. ಇದೇ ವೇಳೆ, ನಿಯಮ ಉಲ್ಲಂಘಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.

ಆದರ್ಶ ಹೌಸಿಂಗ್ ಸೊಸೈಟಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಪ್ರಕರಣವನ್ನು ಮಹಾರಾಷ್ಟ್ರ ಸರ್ಕಾರ ನ್ಯಾಯಾಂಗ ತನಿಖೆಗೆ ಆದೇಶಿಸಿತ್ತು. ಅದರಂತೆ ತನಿಖೆ ನಡೆಸಿದ ಆಯೋಗ ಕಳೆದ ತಿಂಗಳು ವರದಿ ಸಲ್ಲಿಸಿತ್ತು.

ನ್ಯಾಯಾಂಗ ಸಮಿತಿ ಸಲ್ಲಿಸಿದ್ದ ವರದಿಯನ್ನು ಮಹಾರಾಷ್ಟ್ರ ಸರ್ಕಾರ ತಿರಸ್ಕರಿಸಿತ್ತು. ಹೀಗಾಗಿ ವರದಿಯನ್ನು ಪುನರ್‌ಪರಿಶೀಲಿಸುವಂತೆ ರಾಹುಲ್ ಗಾಂಧಿ ಹೇಳಿದ್ದರು. ರಾಹುಲ್ ಗಾಂಧಿಯ ಹೇಳಿಕೆ ಬೆನ್ನಲ್ಲೆ  ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸಹ ವರದಿಯನ್ನು ಮರುಪರಿಶೀಲನೆ ಮಾಡುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಸೂಚಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.