ಮಾಜಿ ಅಧ್ಯಕ್ಷ ಪವೇರ್ಜ್ ಮುಷರ್ರಫ್‌ಗೆ ಹೃದಯಾಘಾತ

ಇಸ್ಲಾಮಾಬಾದ್: ಪಾಕಿಸ್ತಾನ ಮಾಜಿ ಅಧ್ಯಕ್ಷ ಪವೇಜ್ ಮುಷರ್ರಫ್ ಅವರು ಗುರುವಾರ ತೀವ್ರ ಹೃದಯಾಘಾತಕ್ಕೆ ಒಳಗಾಗಿದ್ದಾರೆ.
ಇಂದು ತೀವ್ರ ಹೃದಯಾಘಾತಕ್ಕೆ ಒಳಗಾದ ಮುಫರಷ್ ಅವರನ್ನು ರಾವಲ್ಪಿಂಡಿ ಸೇನಾಪಡೆಗೆ ಸೇರಿದ ಹೃದ್ರೋಗ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ ಎಂದು ಪಾಕಿಸ್ತಾನ ಮುಸ್ಲಿಂ ಲೀಗ್(ಎಪಿಎಂಎಲ್)ನ ವಕ್ತಾರರು ತಿಳಿಸಿದ್ದಾರೆ.
ಮುಷರ್ರಫ್ ವಿರುದ್ಧದ ದೇಶದ್ರೋಹ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಅವರನ್ನು ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಲು ಕರೆತರುತ್ತಿದ್ದ ವೇಳೆ, ತಮಗೆ ತೀವ್ರವಾಗಿ ಎದೆ ನೊಯಿತ್ತಿದೆ ಎಂದು ಮುಷರ್ರಫ್ ಅಧಿಕಾರಿಗಳಿಗೆ ತಿಳಿಸಿದರು. ಹೀಗಾಗಿ ಅಧಿಕಾರಿಗಳು ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನ್ಯಾಯಾಲಯದ ಮುಂದೆ ಮುಷರ್ರಫ್ ಅವರನ್ನು ಹಾಜರುಪಡಿಸಬೇಕಿತ್ತು. ಆದರೆ ಪದೇ ಪದೇ ಅನಾರೋಗ್ಯದ ಕಾರಣ ನೀಡುತ್ತಿರುವ ಮುಷರ್ರಫ್ ಅವರು, ಇದು ಮೂರನೇ ಬಾರಿಗೆ ವಿಚಾರಣೆಯಿಂದ ತಪ್ಪಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


