ಈಗಿನ ಸುದ್ದಿ

ನ್ಯಾಯಮೂರ್ತಿಗೆ ಲಂಚ ಪ್ರಕರಣ: ಮಾಜಿ ನ್ಯಾಯಧೀಶೆಯ ಅರ್ಜಿ ತಿರಸ್ಕೃತ

Published On :

ನವದೆಹಲಿ: ನ್ಯಾಯಮೂರ್ತಿಗಳ ಮನೆ ಬಾಗಿಲಿಗೆ ಲಂಚ ಪ್ರಕರಣ ಸಂಬಂಧ ತಮ್ಮ ವಿರುದ್ಧ ವಿಚಾರಣೆಯನ್ನು ಕೈ ಬಿಡುವಂತೆ ಕೋರಿ ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನಿರ್ಮಲ್ ಯಾದವ್ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಳ್ಳಿ ಹಾಕಿದೆ.

ಮಾಜಿ ನ್ಯಾಯಧೀಶೆ ವಿವಿಧ ನ್ಯಾಯಾಲಯಗಳಲ್ಲಿ ಒಂದಕ್ಕಿಂತ ಹೆಚ್ಚು ಅರ್ಜಿಗಳನ್ನು ಸಲ್ಲಿಸುವ ಮೂಲಕ ವಿಚಾರಣೆ ವಿಳಂಬ ಮಾಡಲು ಯತ್ನಿಸುತ್ತಿದ್ದಾರೆ ಎಂದು ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಧೀಶ ಹೆಚ್.ಎಲ್ ದತ್ತು ಅವರ ನೇತೃತ್ವದ ಪೀಠ ಹೇಳಿದೆ.

2008, ಅಗಸ್ಟ್  13ರಂದು ಹೈಕೋರ್ಟ್‌ನ ಮತ್ತೊಬ್ಬ ನ್ಯಾಯಮೂರ್ತಿ ನಿರ್ಮಲ್‌ಜಿತ್ ಕೌರ್ ಅವರ ನಿವಾಸಕ್ಕೆ 15 ಲಕ್ಷ ರು. ತಲುಪಿಸಲಾಗಿತ್ತು ಎಂಬ ವಿವಾದ ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್‌ನಲ್ಲಿ ತಲ್ಲಣ ಸೃಷ್ಟಿಸಿತ್ತು. ನಂತರ ಅವರು ಈ ವಿಷಯವನ್ನು ಚಂಡೀಗಢ ಪೊಲೀಸರ ಗಮನಕ್ಕೆ ತಂದಿದ್ದರು. ಯಾದವ್ ಅವರಿಗೆ ತಲುಪಿಸಬೇಕಾಗಿದ್ದ ಹಣ ತಪ್ಪಾಗಿ ಕೌರ್ ಅವರ ನಿವಾಸಕ್ಕೆ ತಲುಪಿದ್ದು, ಹೆಸರಿನ ಗೊಂದಲದಿಂದ ಈ ಅವಾಂತರ ಸೃಷ್ಟಿಯಾಗಿತ್ತು ಎನ್ನಲಾಗಿದೆ.

ಈ ಹಿಂದೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ತಡೆಯೊಡ್ಡಬೇಕು ಎಂದು ಕೋರಿ ನಿರ್ಮಲ್ ಯಾದವ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಅವರು ಮೇಲ್ಮನವಿ ಸಲ್ಲಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.