ಈಗಿನ ಸುದ್ದಿ

ತೇಜ್ಪಾಲ್ ಬಂಧನ ಅವಧಿ ವಿಸ್ತರಿಸಿದ ನ್ಯಾಯಾಲಯ

ತೇಜ್ಪಾಲ್ ಬಂಧನ ಅವಧಿ ವಿಸ್ತರಿಸಿದ ನ್ಯಾಯಾಲಯ
Published On :

ಪಣಜಿ: ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹಿನ್ನೆಲೆ ಬಂಧಿತರಾಗಿರುವ ತೆಹೆಲ್ಕಾ ನಿಯತಕಾಲಿಕೆ ಮಾಜಿ ಸಂಪಾದಕ ತರುಣ್ ತೇಜ್ಪಾಲ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಪಣಜಿ ನ್ಯಾಯಾಲಯ ಶನಿವಾರ ವಿಸ್ತರಿಸಿದೆ.

ಜಾಮೀನಿಗಾಗಿ ತೇಜ್ಪಾಲ್ ಸಲ್ಲಿಸಿದ ಅರ್ಜಿಯ ವಿಚಾರಣೆ ಹಿನ್ನೆಲೆಯಲ್ಲಿ ಗೋವಾ ಪೊಲೀಸರು ಇಂದು ಪಣಜಿ ನ್ಯಾಯಾಲಯದ ಮುಂದೆ ಅವರನ್ನು ಹಾಜರುಪಡಿಸಿದರು. ಪ್ರಕರಣದ ವಿಚಾರಣೆ ವೇಳೆ ಗೋವಾ ಪೊಲೀಸರು ತೇಜ್ಪಾಲ್‌ರಿಗೆ ಜಾಮೀನು ನೀಡಬಾರದು. ಅಲ್ಲದೆ ಅವರ ನ್ಯಾಯಾಂಗ ಬಂಧನದ ಅವಧಿಯನ್ನು 14 ದಿನಗಳ ಕಾಲ ವಿಸ್ತರಿಸಬೇಕು ಎಂದು ಕೋರ್ಟ್‌ಗೆ ಮನವಿ ಮಾಡಿದರು.

ವಿಚಾರಣೆ ನಡೆಸಿದ ಕೋರ್ಟ್ ಪೊಲೀಸರ ಮನವಿಯನ್ನು ಪುರಸ್ಕರಿಸಿದರು. ಆದರೆ ನ್ಯಾಯಾಂಗ ಬಂಧನದ ಅವಧಿಯನ್ನು 14 ದಿನಗಳ ಬದಲಾಗಿ 10 ದಿನಗಳಿಗೆ ಮಾತ್ರ ವಿಸ್ತರಿಸಿದೆ.

ಗೋವಾದ ಪಂಚತಾರ ಹೋಟೆಲ್‌ವೊಂದರಲ್ಲಿ ನಡೆದ ತೆಹೆಲ್ಕಾ ನಿಯತಕಾಲಿಕೆಯ ಸಮಾರಂಭವೊಂದರಲ್ಲಿ ಕಿರಿಯ ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ನೀಡದ ಆರೋಪ ತೇಜ್ಪಾಲ್ ಮೇಲಿದೆ. ಈ ಆರೋಪ ಹಿನ್ನೆಲೆಯಲ್ಲಿ ಕಳೆದ ವರ್ಷ ನವೆಂಬರ್ 30ರಂದು ತೇಜ್ಪಾಲ್‌ರನ್ನು ಗೋವಾ ಪೊಲೀಸರು ಬಂಧಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.