ವಿಪಕ್ಷ ಸ್ಥಾನ ನೀಡುವಂತೆ ಸ್ಪೀಕರ್ಗೆ ಬಿಜೆಪಿ ಮನವಿ

ಬೆಂಗಳೂರು: ಬಿಜೆಪಿಯಲ್ಲಿ ಕೆಜೆಪಿ ವಿಲೀನವಾದ ಹಿನ್ನೆಲೆಯಲ್ಲಿ ಬಿಜೆಪಿಗೆ ಅಧಿಕೃತ ವಿಪಕ್ಷ ಸ್ಥಾನ ನೀಡುವಂತೆ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರಿಗೆ ಮನವಿ ಮಾಡಿರುವುದಾಗಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಶನಿವಾರ ತಿಳಿಸಿದ್ದಾರೆ.
ಸ್ಪೀಕರ್ ಅವರನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ಜಗದೀಶ್ ಶೆಟ್ಟರ್, ಮಾಜಿ ಮುಖ್ಯಮಂತ್ರಿ ಹಾಗೂ ಕೆಜೆಪಿ ಮುಖಂಡ ಯಡಿಯೂರಪ್ಪ ಅವರು ಬಿಜೆಪಿಗೆ ಸೇರಲಿದ್ದಾರೆ. ಹೀಗಾಗಿ ಅಧಿಕೃತ ವಿಪಕ್ಷ ಸ್ಥಾನ ನೀಡುವಂತೆ ಸ್ಪೀಕರ್ ಅವರಿಗೆ ಮನವಿ ಮಾಡಿರುವುದಾಗಿ ತಿಳಿಸಿದ್ದಾರೆ.
ಬಿಜೆಪಿ ಜತೆ ವಿಲೀನಕ್ಕೆ ಕೆಜೆಪಿ ಶಾಸಕರು ಒಪ್ಪಿದ್ದಾರೆ. ಇದರೊಂದಿಗೆ ಬಿಜೆಪಿ ಶಾಸಕರ ಸದಸ್ಯರ ಸಂಖ್ಯೆಯೂ ಹೆಚ್ಚಾಗಲಿದೆ. ಹೀಗಾಗಿ ವಿಪಕ್ಷ ಸ್ಥಾನದಲ್ಲಿ ಕೂರಲು ಬಿಜೆಪಿಗೆ ಅವಕಾಶ ನೀಡುವಂತೆ ಸ್ಪೀಕರ್ ಅವರಿಗೆ ಮನವಿ ಮಾಡಲಾಗಿದೆ ಎಂದು ಶೆಟ್ಟರ್ ತಿಳಿಸಿದ್ದಾರೆ.
ಕೆಜೆಪಿ ಶಾಸಕರು ಜನವರಿ 9ರಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗುತ್ತಾರೆ. ಅವರನ್ನು ಸೇರಿಸಿಕೊಳ್ಳಲು ಬಿಜೆಪಿ ಒಪ್ಪಿಗೆ ಪತ್ರವನ್ನು ನೀಡಲಾಗಿದೆ ಎಂದು ಶೆಟ್ಟರ್ ತಿಳಿಸಿದ್ದಾರೆ. ಸದ್ಯ ಶಾಸಕಾಂಗದ ನಾಯಕ ನಾನೇ ಆಗಿರುವುದರಿಂದ, ನಾನೇ ಪ್ರತಿಪಕ್ಷ ನಾಯಕನಾಗುತ್ತೇನೆ ಎಂದು ತಿಳಿಸಿದ್ದಾರೆ.
ಶೆಟ್ಟರ್ ಅವರ ಮನವಿಯನ್ನು ಪುರಸ್ಕರಿಸಿರುವ ಸ್ಪೀಕರ್ ಅವರು, ಬಿಜೆಪಿ ಜೊತೆ ಕೆಜೆಪಿ ವಿಲೀನಕ್ಕೆ ಸಮಸ್ಯೆ ಇಲ್ಲ. ಬಿಜೆಪಿಗೆ ವಿಪಕ್ಷ ಸ್ಥಾನ ನೀಡುವ ಕುರಿತು ಕಾನೂನು ತಜ್ಞರ ಜತೆ ಸಮಾಲೋಚನೆ ನಡೆಸಿ ತೀರ್ಮಾನಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


