15 ದಿನದಲ್ಲಿ ಎಎಪಿ ಲೋಕಸಭಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ನವದೆಹಲಿ: ರಾಷ್ಟ್ರರಾಜಧಾನಿ ದೆಹಲಿ ಗದ್ದುಗೆ ಏರಿರುವ ಆಮ್ ಆದ್ಮಿ ಪಕ್ಷ(ಎಎಪಿ), ಇದೀಗ ರಾಷ್ಟ್ರರಾಜಕಾರಣದತ್ತ ಗಮನ ಹರಿಸಿದೆ. ಇನ್ನು ಕೆಲವೇ ತಿಂಗಳಲ್ಲಿ ನಡೆಯುವ ಲೋಕಸಭಾ ಚುನಾವಣೆಗೆ ಎಎಪಿ ಭರ್ಜರಿ ಸಿದ್ಧತೆ ನಡೆಸಿದೆ.
ಇನ್ನು 15 ದಿನದಲ್ಲಿ ತನ್ನ ಲೋಕಸಭಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲು ಎಎಪಿ ನಿರ್ಧರಿಸಿದ್ದು, ಈ ಸಂಬಂಧ ಇಂದು ನಡೆದ 23 ಸದಸ್ಯರ ಎಎಪಿ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಲೋಕಸಭಾ ಚುನಾವಣೆ ಕುರಿತು ಸಮಾಲೋಚನೆ ನಡೆಸಲಾಯಿತು. ಸಭೆಯಲ್ಲಿ ಎಲ್ಲ 23 ಸದಸ್ಯರು ಭಾಗವಹಿಸಿದ್ದರು.
ದೆಹಲಿಯಲ್ಲಿ ಭರ್ಜರಿ ಗೆಲುವು ಸಾಧಿಸಿದ ನಂತರ ಲೋಕಸಭೆ ಚುನಾವಣೆಯಲ್ಲಿ ಪಕ್ಷ ಸ್ಪರ್ಧಿಸಲಿದೆ ಎಂದು ಈ ಮುಂಚೆ ಎಎಪಿ ಘೋಷಿಸಿತ್ತು. ಅದರಂತೆ ಈಗ ದೆಹಲಿ, ಗುಜರಾತ್ ಹರಿಯಾಣ, ಉತ್ತರ ಪ್ರದೇಶ, ಮಹಾರಾಷ್ಟ್ರ ಮತ್ತು ಕರ್ನಾಟಕದ ಎಲ್ಲ ಲೋಕಸಭಾ ಕ್ಷೇತ್ರಗಳಲ್ಲೂ ತನ್ನ ಅಭ್ಯರ್ಥಿಗಳನ್ನು ಕಣಕ್ಕೀಳಿಸಲು ನಿರ್ಧರಿಸಿದೆ.
ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪಕ್ಷದ ನಾಯಕ ಸಂಜಯ್ ಸಿಂಗ್ ಅವರು, ಮುಂದಿನ 10ರಿಂದ 15ದಿನದಲ್ಲಿ ಲೋಕಸಭಾ ಚುನಾವಣೆಗಾಗಿ ಪಕ್ಷ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಿದೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


