ಈಗಿನ ಸುದ್ದಿ

ತೆಲಂಗಾಣ ಗದ್ದಲ: ಕಲಾಪ ಮುಂದೂಡಿಕೆ

ತೆಲಂಗಾಣ ಗದ್ದಲ: ಕಲಾಪ ಮುಂದೂಡಿಕೆ
Published On :

ಹೈದರಾಬಾದ್: ಆಂಧ್ರಪ್ರದೇಶ ವಿಧಾನಸಭೆ ಅಧಿವೇಶನದ ಎರಡನೇ ದಿನವಾದ ಶನಿವಾರವೂ ಆಂಧ್ರ ವಿಭಜನೆ ಕುರಿತಾಗಿ ತೆಲಂಗಾಣ ಮತ್ತು ಸೀಮಾಂಧ್ರದ ಸದಸ್ಯರು ಕೋಲಾಹಲ ಎಬ್ಬಿಸಿದರು. ಹೀಗಾಗಿ ಕಲಾಪವನ್ನು ಸೋಮವಾರಕ್ಕೆ ಮುಂದೂಡಲಾಯಿತು.

ತೆಲಂಗಾಣ ಮತ್ತು ಸೀಮಾಂಧ್ರದ ಸದಸ್ಯರು ರಾಜ್ಯ ವಿಭಜನೆ ವಿಷಯವಾಗಿ ಇಂದು ಸದನದ ಬಾವಿಗೆ ಇಳಿದು ಗದ್ದಲ ನಡೆಸಿದರು. ಹೀಗಾಗಿ ಇಂದು ಸಹ ವಿಧಾನಸಭೆ ಅಧಿವೇಶನದಲ್ಲಿ ಯಾವುದೇ ಕಾರ್ಯಗಳಿಲ್ಲದೇ ಕಲಾಪವನ್ನು ದಿನದ ಮಟ್ಟಿಗೆ ಮುಂದೂಡಲಾಯಿತು.

ತೆಲಂಗಾಣ ಮರುವಿಂಗಡಣೆ ಮಸೂದೆ(2013)ಯ ಕರಡನ್ನು ಹಿಂಪಡೆಯುವಂತೆ ಆಗ್ರಹಿಸಿ ಸೀಮಾಂಧ್ರ ಭಾಗದ ತೆಲಗು ದೇಶಂ ಹಾಗೂ ವೈಎಸ್‌ಆರ್ ಕಾಂಗ್ರೆಸ್ ಪಕ್ಷಗಳ ಸದಸ್ಯರು ಸಭಾಧ್ಯಕ್ಷರ ವೇದಿಕೆಗೆ ನುಗ್ಗಿ ಗದ್ದಲ ನಡೆಸಿದರು. ಇದಕ್ಕೆ ಪ್ರತಿಯಾಗಿ ಮಸೂದೆಯನ್ನು ಬೆಂಬಲಿಸಿ ಸದನದ ಬಾವಿಗಿಳಿದ ತೆಲಂಗಾಣ ರಾಷ್ಟ್ರೀಯ ಸಮಿತಿಯ ಶಾಸಕರು ಕರಡಿನ ಮೇಲೆ ಚರ್ಚೆ ಆರಂಭಿಸುವಂತೆ ಆಗ್ರಹಿಸಿದರು.

ಎರಡು ಕಡೆಯ ಶಾಸಕರು ಸದನದ ಬಾವಿಗೆ ಇಳಿದು ಗದ್ದಲ ಎಬ್ಬಿಸಿದರಿಂದ ಉಪ ಸಭಾಧ್ಯಕ್ಷ ಮಲ್ಲು ಭಟ್ಟಿ ವಿಕ್ರಮಾರ್ಕ್ ಅವರು, ಎರಡು ಬಾರಿ ಸದನದ ಕಲಾಪವನ್ನು ಮುಂದೂಡಿದರು. ಆ ನಂತರವು ಪರಿಸ್ಥಿತಿ ಹತೋಟಿಗೆ ಬಾರದ ಹಿನ್ನೆಲೆಯಲ್ಲಿ ಕಲಾಪವನ್ನು ಸೋಮವಾರಕ್ಕೆ ಮುಂದೂಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.