ಬಾಂಗ್ಲಾ ಚುನಾವಣೆ: 10 ಸಾವು

ಢಾಕಾ: ಹಿಂಸಾ ಪೀಡಿತ ಬಾಂಗ್ಲಾದೇಶದಲ್ಲಿ ಸಾರ್ವತ್ರಿಕ ಚುನಾವಣೆಯನ್ನು ಬಹಿಷ್ಕರಿಸುವಂತೆ ವಿಪಕ್ಷ ಬಾಂಗ್ಲಾ ನ್ಯಾಷನಲ್ ಪಾರ್ಟಿ(ಬಿಎನ್ಪಿ) ಕರೆ ನೀಡಿದ್ದರಿಂದ ಹೆಚ್ಚಿನ ಭದ್ರತೆಯೊಂದಿಗೆ ಭಾನುವಾರ ಬೆಳಗ್ಗೆ 8 ಗಂಟೆಯಿಂದ ಮತದಾನ ಪ್ರಕ್ರಿಯೆ ಪ್ರಾರಂಭವಾಗಿದೆ.
ಮತಗಟ್ಟೆಗಳ ಮುಂದೆ ಚುನಾವಣೆಯನ್ನು ಬಹಿಷ್ಕರಿಸುವಂತೆ ಪ್ರತಿಭಟನೆಗೆ ಮುಂದಾದ ವೇಳೆ ಪೊಲೀಸರ ಗುಂಡಿಗೆ 10 ಮಂದಿ ಪ್ರತಿಭಟನಾಕರರು ಬಲಿಯಾಗಿದ್ದಾರೆ. ಇದೇ ವೇಳೆ, ಕಾರ್ಯನಿರತ ಪೊಲೀಸರಿಗೂ ಗಾಯಗಳಾಗಿರುವ ಘಟನೆ ವರದಿಯಾಗಿದೆ.
ಚುನಾವಣೆಯನ್ನು ಬಹಿಷ್ಕರಿಸುವಂತೆ ಬಿಎನ್ಪಿ ಕರೆ ನೀಡಿದ ಹಿನ್ನೆಲೆಯಲ್ಲಿ ಬಾಂಗ್ಲಾದಾದ್ಯಂತ ಹೆಚ್ಚಿನ ಭದ್ರತೆಯೊಂದಿಗೆ ಮತದಾನ ಆರಂಭವಾಗಿದ್ದು, ಆತಂಕಕ್ಕೆ ಒಳಗಾಗಿರುವ ಜನತೆ ಮತದಾನ ಮಾಡಲು ಮುಂದೆ ಬಾರದೆ ಇರುವುದರಿಂದ ಕಳೆಪ ಮತದಾನ ನಡೆದಿದೆ.
ದೇಶಾದ್ಯಂತ ಶಾಲಾ ಕಾಲೇಜು ಮತ್ತು ಸಾರ್ವಜನಿಕ ಕಟ್ಟಡಗಳಲ್ಲಿ ಸುಮಾರು 18 ಸಾವಿರ ಮತಗಟ್ಟೆಗಳನ್ನು ತೆರೆಯಲಾಗಿದೆ. 130 ಮತಗಟ್ಟೆಗಳ ಮೇಲೆ ದಾಳಿ ಹಿನ್ನೆಲೆಯಲ್ಲಿ ಅಲ್ಲಿನ ಮತಗಟ್ಟೆಗಳಲ್ಲಿನ ಮತದಾನ ಪ್ರಕ್ರಿಯೆಯನ್ನು ನಿಲ್ಲಿಸಲಾಗಿದೆ. ಇಂದಿನ ಮತದಾನ ಪ್ರಕ್ರಿಯೆಯಲ್ಲಿ ದೇಶಾದ್ಯಂತ ಸುಮಾರು 40 ಮಿಲಿಯನ್ ಮತದಾರರು ಮತ ಚಲಾಯಿಸುವ ಅಧಿಕಾರ ಹೊಂದಿದ್ದಾರೆ.
ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಮತಗಟ್ಟೆಗಳಲ್ಲಿ ಹೆಚ್ಚಿನ ಭದ್ರತೆಯನ್ನು ಒದಗಿಸಲಾಗಿದ್ದು, ದೇಶಾದ್ಯಂತ ಸುಮಾರು 3.75 ಸಾವಿರ ಭದ್ರತಾ ಸಿಬ್ಬಂದಿಗಳನ್ನು ನೇಮಿಸಲಾಗಿದೆ. ಅಲ್ಲದೆ ಬಾಂಗ್ಲಾದೇಶ ಗಡಿ ಭದ್ರತೆ ಪಡೆ, ಅಪರಾಧ ವಿರೋಧಿ ಪಡೆ ಹಾಗೂ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


