ಈಗಿನ ಸುದ್ದಿ

ಹಿಂದಿನ ಚುನಾವಣೆ ಸಂಪ್ರದಾಯಕ್ಕೆ ಕೊನೆ: ಮೋದಿ

ಹಿಂದಿನ ಚುನಾವಣೆ ಸಂಪ್ರದಾಯಕ್ಕೆ ಕೊನೆ: ಮೋದಿ
Published On :

ನವದೆಹಲಿ: ಇಸ್ರೊ ಸಂಸ್ಧೆ ಜಿಎಸ್‌ಎಲ್‌ವಿ-ಡಿ5 ಉಪಗ್ರಹವನ್ನು ಯಶಸ್ವಿಯಾಗಿ ಉಡಾವಣೆ ಮಾಡಿರುವುದಕ್ಕೆ ಭಾರತೀಯ ಜನತಾ ಪಕ್ಷ(ಬಿಜೆಪಿ)ದ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಭಾನುವಾರ ಸಂತಸ ವ್ಯಕ್ತಪಡಿಸಿದ್ದಾರೆ.

ನವದೆಹಲಿಯಲ್ಲಿಂದು ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಹಿಂದಿನ ಚುನಾವಣೆ ಸಂಪ್ರದಾಯಗಳಿಗೆ ಬ್ರೇಕ್ ಬೀಳಲಿದ್ದು, 2014ರ ಲೋಕಸಭಾ ಚುನಾವಣೆ ಐತಿಹಾಸಿಕವಾಗಲಿದೆ ಎಂದು ಮೋದಿ ತಿಳಿಸಿದ್ದಾರೆ.

ದೇಶದ ಜನತೆ ಹಿಂದಿನ ಸಂಪ್ರದಾಯಿಕ ಕಂದಾಚಾರಗಳಿಂದ ಬೇಸತ್ತಿದ್ದು, ಮುಂದಿನ ಲೋಕಸಭೆ ಚುನಾವಣೆಯಲ್ಲಿ ಅಭಿವೃದ್ಧಿ ಪಥದಲ್ಲಿ ಮುನ್ನಡೆಸುವ ಪಕ್ಷವನ್ನು ಜನ ಬೆಂಬಲಿಸಲಿದ್ದಾರೆ. ಈಗ ನಡೆಯುತ್ತಿರುವುದು ಚುನಾವಣೆಯಲ್ಲ, ಅದು ಭ್ರಷ್ಟಾಚಾರ ವಿರುದ್ಧದ ಚಳುವಳಿಯಾಗಿ ಪರಿಣಮಿಸಲಿದೆ ಎಂದರು.

ಮುಂದಿನ ಚುನಾವಣೆಯಲ್ಲಿ ಜಾತಿ ಕೇಂದ್ರಿತ ರಾಜಕಾರಣ ನಡೆಯುವುದಿಲ್ಲ. ಅಭಿವೃದ್ಧಿಗಷ್ಟೇ ಮತದಾರ ಮಣೆ ಹಾಕಲಿದ್ದಾರೆ. ಅಭಿವೃದ್ಧಿ ಮಾಡಿರುವುದಾಗಿ ಕಾಂಗ್ರೆಸ್ ಬಿಂಬಿಸಿಕೊಳ್ಳುತ್ತಿದೆ. ಅಭಿವೃದ್ಧಿ ಎಂದರೆ ಅದು ಚೀನಾ ನೋಡಿ ಕಲಿಯಬೇಕು ಎಂದರು. ದೇಶದ ಜನರಿಗೆ ಬಾಯಿ ಮಾತಿನ ಆಶ್ವಾಸನೆಗಳು ಸಾಕಾಗಿದೆ. ಮತದಾರರು ದೇಶದ ಅಭಿವೃದ್ಧಿ ಎದುರು ನೋಡುತ್ತಿದ್ದಾರೆ ಎಂದು ಮೋದಿ ತಿಳಿಸಿದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.