ಈಗಿನ ಸುದ್ದಿ

ಜ.10ರಿಂದ ದೇಶಾದ್ಯಂತ ಎಎಪಿ ಸದಸ್ಯತ್ವ ಅಭಿಯಾನ

ಜ.10ರಿಂದ ದೇಶಾದ್ಯಂತ ಎಎಪಿ ಸದಸ್ಯತ್ವ ಅಭಿಯಾನ
Published On :

ನವದೆಹಲಿ: ಲೋಕಸಭೆ ಚುನಾವಣೆಯ ಮೇಲೆ ಕಣ್ಣಿಟ್ಟಿರುವ ಆಮ್ ಆದ್ಮಿ ಪಕ್ಷ(ಎಎಪಿ) ದೇಶಾದ್ಯಂತ ಸದಸ್ಯತ್ವ ಅಭಿಯಾನ ನಡೆಸಲು ಭಾನುವಾರ ತೀರ್ಮಾನಿಸಿದೆ.

ಇಂದು ನಡೆದ ಎಎಪಿ ಕಾರ್ಯಕಾರಿಣಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಎಎಪಿ ವಕ್ತಾರ ಯೋಗೇಂದ್ರ ಯಾದವ್ ಅವರು ತಿಳಿಸಿದ್ದಾರೆ.

ಸಭೆಯ ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದೇಶಾದ್ಯಂತ ಎಎಪಿ ಸದಸ್ಯತ್ವ ನೊಂದಣಿಗಾಗಿ 'ಮೈ ಭೀ ಆಮ್ ಆದ್ಮಿ' ಹೆಸರಲ್ಲಿ ಅಭಿಯಾನ ನಡೆಸಲಾಗುವುದು. ಈ ವೇಳೆ ಪ್ರತಿಯೊಬ್ಬರು ತಮ್ಮ ಸದಸ್ಯತ್ವವನ್ನು ನೊಂದಾಯಿಸಿಕೊಳ್ಳಬಹುದು. ಸದಸ್ಯತ್ವ ಪಡೆಯುವುದಕ್ಕೆ ಯಾವುದೇ ಶುಲ್ಕ ನಿಗದಿ ಪಡಿಸಿಲ್ಲ ಎಂದು ಯಾದವ್ ಹೇಳಿದ್ದಾರೆ.

ಎಎಪಿ ಮುಖಂಡ ಗೋಪಾಲರಾಯ್ ಅವರು ನೇತೃತ್ವದಲ್ಲಿ ಜನವರಿ 10 ರಿಂದ ಜನವರಿ 26ರವರಿಗೆ 'ಮೈ ಭೀ ಆಮ್ ಆದ್ಮಿ' ಅಭಿಯಾನ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

ಲೋಕಸಭಾ ಚುನಾವಣೆ ಹಿನ್ನೆಲೆ 3 ಜನರ ತಂಡ ರಚನೆ ಮಾಡಲಾಗುವುದು. ಈ ತಂಡ ದೇಶಾದ್ಯಂತ ಸುತ್ತಾಡಿ ಅಲ್ಲಿನ ಸಮಸ್ಯೆಗಳ ಕುರಿತಾಗಿ ನೀಡುವ ವರದಿ ಆಧಾರದ ಮೇಲೆ ಪಕ್ಷದ ಚುನಾವಣಾ ಪ್ರಣಾಳಿಕೆಯನ್ನು ಮಾರ್ಚ್ನಲ್ಲಿ ಬಿಡುಗಡೆ ಮಾಡಲಾಗುವುದು ಎಂದರು.

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಎಎಪಿ ಹರಿಯಾಣದಿಂದಲು ಸ್ಪರ್ಧಿಸಲಿದ್ದು, ಹರಿಯಾಣದ ಎಲ್ಲಾ 90 ಕ್ಷೇತ್ರಗಳಿಂದಲೂ ಅಭ್ಯರ್ಥಿಗಳನ್ನು ಕಣಕ್ಕೀಳಿಸಲು ತೀರ್ಮಾನಿಸಲಾಗಿದೆ ಎಂದು ಯೋಗೇಂದ್ರ ಯಾದವ್ ಹೇಳಿದ್ದಾರೆ.



Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.