ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರ ಮೆರವಣಿಗೆಗೆ ಚಾಲನೆ

ಮಡಿಕೇರಿ: ಕೊರೆಯುವ ಚಳಿಯ ನಡುವೆಯೇ ಕೊಡಗಿನಲ್ಲಿ 80ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರ ವರ್ಣರಂಜಿತ ಮೆರವಣಿಗೆಗೆ ಮಂಗಳವಾರ ಚಾಲನೆ ದೊರೆತಿದೆ.
ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ. ಮಹದೇವಪ್ಪ ಅವರು ಇಂದು ಬೆಳಗ್ಗೆ 10ಗಂಟೆಯ ಸುಮಾರಿಗೆ ಸಮ್ಮೇಳನ ಅಧ್ಯಕ್ಷ ಡಾ.ನಾ.ಡಿಸೋಜ ಅವರ ಮೆರಣಿಗೆಗೆ ಚಾಲನೆ ನೀಡಿದರು.
ನಾ. ಡಿಸೋಜ ಅವರ ಸಾಹಿತ್ಯರಥದ ಮೆರವಣಿಗೆ ಗಾಂಧಿನಗರದ ಗಾಂಧಿಮೈದಾನದಿಂದ ಆರಂಭವಾಗಿ ಕೊಡಗಿನ ಪ್ರಮುಖ ಬೀದಿಗಳ ಸಂಚರಿಸುವದರೊಂದಿಗೆ ಪ್ರಧಾನ ವೇದಿಕೆ ತಲುಪಲಿದೆ. ಮೆರವಣಿಗೆಯಲ್ಲಿ ರಾಜ್ಯದ 80 ಕಲಾತಂಡಗಳು, 5000 ಕಲಾವಿದರು ಭಾಗಿಯಾಗಿದ್ದಾರೆ. ಅಲ್ಲದೆ 80 ಮಹಿಳೆಯರು ಕಳಸ ಹೊತ್ತು ಮೆರವಣಿಗೆಯಲ್ಲಿ ಸಾಗುತ್ತಿದ್ದಾರೆ.
ನಾ'ಡಿಸೋಜ ಅವರ ಪುರಮೆರವಣಿಗೆ ನಂತರ, ಮ.12 ಗಂಟೆಗೆ ಸಿಎಂ ಸಿದ್ದರಾಮಯ್ಯ ಅವರು ಉದ್ಘಾಟಿಸುವುದರೊಂದಿಗೆ 80ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ ದೊರೆಯಲಿದೆ.
ಮುಖ್ಯ ವೇದಿಕೆಯಲ್ಲಿ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಶಾಂತವೀರ ಮಲ್ಲಿಕಾರ್ಜುನ ಸ್ವಾಮೀಜಿ, ಲೋಕೋಪಯೋಗಿ ಸಚಿವ ಎಚ್.ಸಿ. ಮಹದೇವಪ್ಪ, ಕಸಾಪ ಅಧ್ಯಕ್ಷ ಪುಂಡಲೀಕ ಹಾಲಂಬಿ, 79ನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಡಾ.ಕೊ. ಚನ್ನಬಸಪ್ಪ, ಕೇಂದ್ರ ಸಚಿವ ಎಂ. ವೀರಪ್ಪ ಮೊಯ್ಲಿ, ವಿಧಾನಪರಿಷತ್ ಸಭಾಪತಿ ಡಿ.ಎಚ್. ಶಂಕರಮೂರ್ತಿ, ಸಚಿವರಾದ ಕೆ.ಜೆ. ಜಾರ್ಜ್, ಉಮಾಶ್ರೀ, ದಿನೇಶ್ ಗೂಂಡೂರಾವ್, ಸಂಸದ ಎಚ್. ವಿಶ್ವನಾಥ, ಶಾಸಕರಾದ ಎಂ.ಪಿ. ಅಪ್ಪಚ್ಚು ರಂಜನ್, ಕೆ.ಜಿ. ಬೋಪಯ್ಯ, ವಿಧಾನಪರಿಷತ್ ಸದಸ್ಯರಾದ ಎಂ.ಸಿ. ನಾಣಯ್ಯ, ಗಣೇಶ ಕಾರ್ಣಿಕ್, ಟಿ.ಜಾನ್ ಭಾಗವಹಿಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


