ಮುಜಾಫರನಗರ ಗಲಭೆ: ತನಿಖಾ ಅಧಿಕಾರಿಗೆ ಸಮನ್ಸ್ ಜಾರಿ
ಮುಜಾಫರ್ನಗರ: ಮುಜಾಫರನಗರ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ಅಧಿಕಾರಿಗೆ ಸ್ಥಳೀಯ ನ್ಯಾಯಾಲಯ ಬುಧವಾರ ಸಮನ್ಸ್ ಜಾರಿ ಮಾಡಿದೆ.
ಮುಜಾಫರನಗರದ ಕವಾಲ್ ಎಂಬಲ್ಲಿ ಹತ್ಯೆಗೈಯಲಾಗಿದ್ದ ಶಾನ್ಹಾವಾಜ್ ಕೊಲೆ ಪ್ರಕರಣದ ಬೆಳವಣಿಗೆ ಬಗ್ಗೆ ವಿವರಣೆ ನೀಡಿ ಎಂದು ತನಿಖಾ ಅಧಿಕಾರಿಗೆ ಮುಖ್ಯ ನ್ಯಾಯಾಮೂರ್ತಿ ನರೇಂದ್ರ ಕುಮಾರ್ ಸಮನ್ಸ್ ಜಾರಿ ಮಾಡಿದ್ದಾರೆ. ಜೂನ್ 14ರೊಳಗೆ ಸಮನ್ಸ್ಗೆ ಉತ್ತರಿಸುವಂತೆ ನ್ಯಾಯಾಲಯ ಸೂಚಿಸಿದೆ.
ಮುಜಾಫರನಗರದ ಗಲಭೆ ಸಂದರ್ಭದಲ್ಲಿ ಕವಾಲ್ ಎಂಬ ಹಳ್ಳಿಯಲ್ಲಿ 26 ವರ್ಷದ ಕಲ್ವುರ್ಫ್ ಶಾನ್ಹಾವಾಜ್ ಎಂಬುವವನ್ನು ಗೌರವ್ ಮತ್ತು ಸಚಿನ್ ಎಂಬ ಇಬ್ಬರು ಯುವಕರು ಕೊಲೆ ಮಾಡಿದ್ದರು.
ತಮ್ಮ ಮಗ ಶಾನ್ಹಾವಾಜ್ ಕೊಲೆ ಪ್ರಕರಣದ ತನಿಖೆಯಲ್ಲಿ ಯಾವುದೇ ಬೆಳವಣಿಗೆ ಕಂಡುಬಂದಿಲ್ಲ ಎಂದು ಶಾನ್ಹಾವಾಜ್ ಅವರ ತಂದೆ ನ್ಯಾಯಾಲಯದ ಮೊರೆ ಹೋಗಿದ್ದರು. ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಲಯ ತನಿಖಾ ಅಧಿಕಾರಿಗೆ ಸಮನ್ಸ್ ಜಾರಿ ಮಾಡಿದೆ.
ಪ್ರಕರಣ ಸಂಬಂಧಪಟ್ಟಂತೆ ಗೌರವ್, ಸಚಿನ್ ಸೇರಿದಂತೆ ಐವರು ಆರೋಪಿಗಳನ್ನು ಬಂಧಿಸಿ ಜಾರ್ಜ್ಶೀಟ್ ಸಲ್ಲಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

