ಡೆಹ್ರಾಡೂನ್ ಎಕ್ಸ್ಪ್ರೆಸ್ ರೈಲಿನಲ್ಲಿ ಅಗ್ನಿ ಅವಘಡ: 9 ಸಾವು

ಥಾಣೆ: 26 ಮಂದಿಯನ್ನು ಬಲಿತೆಗೆದುಕೊಂಡ ನಾಂದೇಡ್ ಎಕ್ಸ್ಪ್ರೆಸ್ ದುರಂತ ಮಾಸುವ ಮುನ್ನವೇ ಮಹಾರಾಷ್ಟ್ರದಲ್ಲಿ ಮತ್ತೊಂದು ರೈಲು ದುರಂತ ಸಂಭವಿಸಿದ್ದು, ಘಟನೆಯಲ್ಲಿ 9 ಮಂದಿ ಸಜೀವ ದಹನವಾಗಿದ್ದಾರೆ.
ಮಹಾರಾಷ್ಟ್ರದ ಥಾಣೆ ಬಳಿ ಇಂದು ಬೆಳಗಿನ 3.30ರ ಸುಮಾರಿಗೆ ಬಾಂದ್ರಾ-ಡೆಹ್ರಾಡೂನ್ ಎಕ್ಸ್ಪ್ರೆಸ್ ರೈಲಿನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ 9 ಪ್ರಯಾಣಿಕರು ಸಜೀವ ದಹನವಾಗಿದ್ದು, 20ಕ್ಕು ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ನಿನ್ನೆ ರಾತ್ರಿ ಮುಂಬೈನ ಬಾಂದ್ರಾದಿಂದ ಹೊರಟ್ಟಿದ್ದ ರೈಲು ಇಂದು ಬೆಳಗಿನ ಜಾವ ಮಹಾರಾಷ್ಟ್ರದ ಥಾಣೆ ಬಳಿ ರೈಲಿನ ಎಸ್-2, ಎಸ್-3 ಮತ್ತು ಎಸ್-4 ಕೋಚ್ನಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ 9 ಮಂದಿ ಮೃತಪಟ್ಟಿದ್ದಾರೆ ಮತ್ತು ಸಾವಿನ ಸಂಖ್ಯೆ ಇನ್ನು ಹೆಚ್ಚುವ ಸಾಧ್ಯತೆ ಇದೆ ಎಂದು ರೇಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ರೈಲು ದುರಂತದಲ್ಲಿ ಮೃತಪಟ್ಟ ಕುಟುಂಬದವರಿಗೆ ತಲಾ 5 ಲಕ್ಷ ರುಪಾಯಿ ಪರಿಹಾರ ಘೋಷಿಸಲಾಗಿದೆ. ಸ್ಥಳಕ್ಕೆ ಇಲಾಖೆಯ ಹಿರಿಯ ಅಧಿಕಾರಿಗಳು ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ರೈಲು ದುರಂತಕ್ಕೆ ಇನ್ನು ನಿಖರವಾದ ಕಾರಣ ತಿಳಿದು ಬಂದಿಲ್ಲ.
ರೈಲು ದುರಂತಗಳು
- 2013. ಡಿ.28, ಬೆಂಗಳೂರು ನಾಂದೇಡ್ ಎಕ್ಸ್ಪ್ರೆಸ್ ದುರಂತ-26 ಸಾವು
- 2013, ಆ.19 - ಬಿಹಾರದಲ್ಲಿ ರಾಜ್ಯರಾಣಿ ಎಕ್ಸ್ಪ್ರೆಸ್ ದುರಂತ - 35 ಸಾವು
- 2012, ಜೂ.30 - ನೆಲ್ಲೂರು ಬಳಿ ದೆಹಲಿ - ತಮಿಳುನಾಡು ಎಕ್ಸ್ಪ್ರೆಸ್ ದುರಂತ - 35 ಬಲಿ
- 2012, ಮೇ 22 - ಅನಂತಪುರ ಬಳಿ ಬೆಂಗಳೂರು - ಹಂಪಿ ಎಕ್ಸ್ಪ್ರೆಸ್ ದುರಂತ - 25 ಬಲಿ
- 2012, ಮಾ.20 - ಹಥ್ರಾಸ್ ಬಳಿ ಮಥುರಾ - ಕಾಸ್ಗಂಜ್ ರೈಲು ದುರಂತ - 15 ಬಲಿ
- 2011, ಜು. 7 - ಮಲ್ಪಾ ಠಾಣೆ ಬಳಿ ಹಳಿ ತಪ್ಪಿದ ಕಲ್ಕಾ ಮೇಲ್ - 71 ಸಾವು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


