ಈಗಿನ ಸುದ್ದಿ

ಭೂಷಣ್ ಹತ್ಯೆ ಮಾಡಬಯಸಿದ್ದರೇ?: ಕೇಜ್ರಿವಾಲ್

ಭೂಷಣ್ ಹತ್ಯೆ ಮಾಡಬಯಸಿದ್ದರೇ?: ಕೇಜ್ರಿವಾಲ್
Published On :

ನವದೆಹಲಿ: ಒಂದು ವೇಳೆ ನನ್ನ ಮತ್ತು ಸುಪ್ರೀಂ ಕೋರ್ಟ್ ಹಿರಿಯ ವಕೀಲ ಹಾಗೂ ಆಮ್ ಆದ್ಮಿ ಪಕ್ಷದ ಪ್ರಶಾಂತ್ ಭೂಷಣ್ ಅವರನ್ನು ಹತ್ಯೆ ಮಾಡ ಬಯಸಿದ್ದೆಯಾದರೆ, ಅದು ಕಾಶ್ಮೀರದ ಸಮಸ್ಯೆಗೆ ಪರಿಹಾರವಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬುಧವಾರ ಹೇಳಿದ್ದಾರೆ.

ಹಿಂಸಾಚಾರ ಸಮಸ್ಯೆಯನ್ನು ಬಗೆಹರಿಸುವುದಿಲ್ಲ ಎಂದಿರುವ ಕೇಜ್ರಿವಾಲ್ ಆಮ್ ಆದ್ಮಿ ಪಕ್ಷದ ಕಚೇರಿ ಮೇಲೆ ನಡೆಸಿರುವ ದಾಳಿಯನ್ನು ಖಂಡಿಸಿದ್ದಾರೆ.

ನನ್ನ ಅಥವಾ ಪ್ರಶಾಂತ್ ಭೂಷಣ್ ಅವರ ಮೇಲೆ ದಾಳಿ ಮಾಡಿ ಏನು ಸಾಧನೆ ಮಾಡಿದಂತಾಗಿದೆ ಎಂದು ಕೇಜ್ರಿವಾಲ್ ಹಿಂದೂಪರ ಸಂಘಟಣೆಗಳನ್ನು ಪ್ರಶ್ನಿಸಿದ್ದಾರೆ.

ಕಾಶ್ಮೀರದಲ್ಲಿ ಸೇನೆ ನಿಯೋಜನೆ ಬಗ್ಗೆ ಕೇಂದ್ರ ಸರ್ಕಾರ ನಿರ್ಧರಿಸಲಿದೆ. ಇದಕ್ಕೆ ನಾಯಕರು ತಮ್ಮ ಅಭಿಪ್ರಾಯಗಳನ್ನು ತಿಳಿಸುತ್ತಾರೆ. ಹಾಗಾಗಿ ಇಲ್ಲಿ ಹಿಂದೂಪರ ಸಂಘಟನೆಗಳು ಕೋಪಗೊಂಡು ಹಿಂಸಾಚಾರ ನಡೆಸುವ ಅಗತ್ಯವಿರಲಿಲ್ಲ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ನನಗೆ ಮತ್ತು ಪ್ರಶಾಂತ್ ಅವರಿಗೆ ಹಿಂಸೆ ನೀಡುವುದರಿಂದ ಕಾಶ್ಮೀರದ ಸಮಸ್ಯೆಯನ್ನು ಬಗೆಹರಿಸುವುದಾದರೇ ಅದಕ್ಕೆ ನಾನು ಸಿದ್ಧ. ಪ್ರಶಾಂತ್ ಮತ್ತು ನಾನು ಇಬ್ಬರು, ಸಂಘಟನೆಗಳು ಹೇಳಿದ ಜಾಗಕ್ಕೆ ಸೂಚಿಸಿದ ಸಮಯಕ್ಕೆ ತೆರಳುತ್ತೇವೆ ಎಂದು ಕೇಜ್ರಿವಾಲ್ ತಿಳಿಸಿದ್ದಾರೆ.

ನನಗೆ ಯಾವುದೇ ಭದ್ರತೆ ಬೇಡ. ಪೂರ್ಣ ಭದ್ರತಾ ವ್ಯವಸ್ಥೆ ಇದ್ದರೆ ಸಮಸ್ಯೆ ಬಗೆಹರಿಸಲು ಸಾಧ್ಯವಿಲ್ಲ. ಆದರೆ ಪಕ್ಷದ ಯಾವುದೇ ನಾಯಕರಿಗೆ ಭದ್ರತೆ ಬೇಕಿದ್ದರೆ ತೆಗೆದುಕೊಳ್ಳಬಹುದಾಗಿದೆ ಎಂದು ಅವರು ಹೇಳಿದ್ದಾರೆ.

ಪ್ರಶಾಂತ್ ಭೂಷಣ್ ಅವರು ಕಾಶ್ಮೀರದಲ್ಲಿ ಸೇನೆ ನಿಯೋಜನೆಗೆ ಜನಮತ ಸಂಗ್ರಹಿಸಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಹಿಂದೂಪರ ಸಂಘಟನೆಗಳು ಇಂದು ಎಎಪಿ ಕಚೇರಿ ಮೇಲೆ ದಾಳಿ ನಡೆಸಿತ್ತು. ದಾಳಿ ನಡೆಸಿದವರಲ್ಲಿ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.