ಈಗಿನ ಸುದ್ದಿ

ಸರಬ್ಜಿತ್ ಸಿಂಗ್ ಕೊಲೆ ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡ ಪಾಕಿಸ್ತಾನ

Published On :

ಲಾಹೋರ್: ಭಾರತ ಮೂಲದ ಸರಬ್ಜಿತ್ ಸಿಂಗ್ ಕೊಲೆ ಪ್ರಕರಣದ ವಿಚಾರಣೆಯನ್ನು ಪಾಕಿಸ್ತಾನದ ನ್ಯಾಯಾಲಯ ಬುಧವಾರ ಕೈಗೆತ್ತಿಕೊಂಡಿದೆ.

ಪಾಕಿಸ್ತಾನದ ಜೈಲಿನಲ್ಲಿ ಹತ್ಯೆಯಾಗಿದ್ದ ಭಾರತೀಯ ಸರಬ್ಜಿತ್ ಸಿಂಗ್ ಪ್ರಕರಣ ಸಬಂಧಿಸಿದಂತೆ ಪೂರ್ಣ ಭದ್ರತೆಯೊಂದಿಗೆ ನ್ಯಾಯಾಲಯ ವಿಚಾರಣೆ ನಡೆಸಲು ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.

ವಿಶೇಷ ಸೇಷನ್ ನ್ಯಾಯಾಲಯದ ನ್ಯಾಯಮೂರ್ತಿ ಸೈಯದ್ ಅಂಜುಂ ರಾಝಾ ಇಂದು ಸರಬ್ಜಿತ್ ಹತ್ಯೆ ಪ್ರಕರಣ ವಿಚಾರಣೆ ಕೈಗೆತ್ತಿಕೊಂಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ದಾಖಲೆಗಳನ್ನು ಪರೀಶೀಲಿಸಿದ ನ್ಯಾಯಾಲಯ ವಿಚಾರಣೆಯನ್ನು ಜನವರಿ 16ಕ್ಕೆ ಮುಂದೂಡಿದೆ.

1990ರಲ್ಲಿ ಪಂಜಾಬ್ ಪ್ರಾಂತ್ಯದಲ್ಲಿ ನಡೆದ ಬಾಂಬ್ ಸ್ಫೋಟದ ಆರೋಪದ ಮೇರೆಗೆ ಸರಬ್ಜಿತ್‌ಗೆ ಗಲ್ಲುಶಿಕ್ಷೆ ವಿಧಿಸಲಾಗಿತ್ತು. ಕೋಟ್ ಲಖ್‌ಪತ್ ಜೈಲಿನಲ್ಲಿದ್ದ ಸರಬ್ಜಿತ್ ಮೇಲೆ ಕಳೆದ ವರ್ಷ ಏಪ್ರಿಲ್ ತಿಂಗಳಿನಲ್ಲಿ 6ಮಂದಿ ಸಹ ಕೈದಿಗಳು ಹಲ್ಲೆ ನಡೆಸಿದ್ದರು. ರಕ್ತದ ಮಡುವಿನಲ್ಲಿ ಬಿದ್ದಿದ್ದ ಸರಬ್ಜಿತ್‌ರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರು ಅವರು ಸಾವನ್ನಪ್ಪಿದ್ದರು.

ಈ ಸಂಬಂಧ ತನಿಖೆ ನಡೆಸಿ, ಆರೋಪಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಹಾಗೂ ಇದರಲ್ಲಿ ಯಾರ ಕೈವಾಡಿವಿದೆ ಎಂಬುದರ ಬಗ್ಗೆ ತನಿಖೆ ನಡೆಸಬೇಕು ಎಂದು ಭಾರತ ಪಾಕಿಸ್ತಾನದ ಸರ್ಕಾರಕ್ಕೆ ಒತ್ತಡ ಹೇರಿತ್ತು.

ಆದರೆ ಪಾಕಿಸ್ತಾನ ಇಲ್ಲ ಸಲ್ಲದ ನೆಪ ಹೇಳುತ್ತಾ ಪ್ರಕರಣದ ವಿಚಾರಣೆ ಮುಂದೂಡತ್ತಾ ಬಂದಿತ್ತು. ಇಂದು ಎಲ್ಲಾ ಭದ್ರತೆಯೊಂದಿಗೆ ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.