ಈಗಿನ ಸುದ್ದಿ

ಅಳಗಿರಿ ಬೆಂಬಲಿಗರನ್ನು ವಜಾಗೊಳಿಸಿದ ಕರುಣಾನಿಧಿ

Published On :

ಚೆನ್ನೈ: ಎಂ.ಕೆ ಅಳಗಿರಿ ಅವರ ಬೆಂಬಲಿಗರ ವಿರುದ್ಧ ಕಿಡಿ ಕಾರಿರುವ ಡಿಎಂಕೆ ಅಧ್ಯಕ್ಷ ಎಂ.ಕರುಣಾನಿಧಿ ಇದೀಗ ಅಳಗಿರಿ ಅವರ ಐವರು ನಿಷ್ಠಾವಂತ ಬೆಂಬಲಿಗರನ್ನು ವಜಾಗೊಳಿಸಿದ್ದಾರೆ.

ಪಕ್ಷದ ನಿಯಮಕ್ಕೆ ವಿರುದ್ಧವಾಗಿ ನಡೆದರೆ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಅಳಗಿರಿ ಅವರಿಗೆ ಎಚ್ಚರಿಕೆ ನೀಡಿದ ನಂತರ ಕರುಣಾ ಈ ನಿರ್ಧಾರ ತೆಗೆದುಕೊಂಡಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಡಿಎಂಕೆ ಪಕ್ಷ ವಿಜಯಕಾಂತ್ ನೇತೃತ್ವದ ಡಿಎಂಡಿಕೆ ಜತೆ ಮೈತ್ರಿ ಹೊಂದುವುದಕ್ಕೆ ಅಳಗಿರಿ ಗುಂಪು ವಿರೋಧ ವ್ಯಕ್ತಪಡಿಸಿತ್ತು.

ಇದು ಮಾತ್ರವಲ್ಲದೆ ಮಧುರೈನಲ್ಲಿ ಡಿಎಂಕೆ ಪ್ರಸ್ತುತ ಯುನಿಟ್‌ನ್ನು ರದ್ದುಗೊಳಿಸಿ ಹೊಸ ಪದಾಧಿಕಾರಿಗಳನ್ನು ಆಯ್ಕೆ ಮಾಡಿತ್ತು. ನೂತನವಾಗಿ ಆಯ್ಕೆಗೊಂಡ ಪದಾಧಿಕಾರಿಗಳಲ್ಲಿ ಹೆಚ್ಚಿನವರು ಸ್ಟಾಲಿನ್‌ನ ಬೆಂಬಲಿಗರಾಗಿದ್ದರು.

ಇತ್ತೀಚೆಗೆ ಅಳಗಿರಿ ಮತ್ತು ಸ್ಟಾಲಿನ್ ನಡುವಿನ ಸಂಬಂಧ ಹಳಸಿಕೊಂಡಿರುವುದೂ ಇದಕ್ಕೆ ಕಾರಣವಾಗಿದೆ.

ಆದಾಗ್ಯೂ, ಸ್ಟಾಲಿನ್ ಅವರನ್ನು ತನ್ನ ಉತ್ತರಾಧಿಕಾರಿಯನ್ನಾಗಿ ಮಾಡಲು ಕರುಣಾ ಚಿಂತಿಸಿದ್ದು, ಇದು ಅಳಗಿರಿ ಅವರಿಗೆ ಅಸಮಾಧಾನವನ್ನುಂಟು ಮಾಡಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.