ಈಗಿನ ಸುದ್ದಿ

ದೇವಯಾನಿ ಅರ್ಜಿ ತಿರಸ್ಕರಿಸಿದ ನ್ಯಾಯಾಲಯ

ದೇವಯಾನಿ ಅರ್ಜಿ ತಿರಸ್ಕರಿಸಿದ ನ್ಯಾಯಾಲಯ
Published On :

ನ್ಯೂಯಾರ್ಕ್: ವೀಸಾ ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ತನ್ನ ವಿರುದ್ಧ ದೋಷಾರೋಪ ಸಲ್ಲಿಕೆಯ ದಿನಾಂಕವನ್ನು ಮುಂದೂಡುವಂತೆ ಕೋರಿ ಭಾರತದ ಉಪರಾಯಭಾರಿ ದೇವಯಾನಿ ಖೋಬ್ರಾಗಡೆ ಅವರು ಸಲ್ಲಿಸಲಾಗಿದ್ದ ಅರ್ಜಿಯನ್ನು ಅಮೆರಿಕ ನ್ಯಾಯಾಧೀಶರು ವಜಾಗೊಳಿಸಿದ್ದಾರೆ.

ವೀಸಾ ವಂಚನೆ ಪ್ರಕರಣದ ದೋಷಾರೋಪ ಸಲ್ಲಿಸಲು ಜನವರಿ 13 ನಿಗದಿಯಾಗಿತ್ತು. ಆದರೆ ದೇವಯಾನಿ ಪರ ವಕೀಲರು ಗಡುವನ್ನು ಫೆಬ್ರವರಿ 12ಕ್ಕೆ ಮುಂದೂಡುವಂತೆ ನ್ಯೂಯಾರ್ಕ್‌ನ ದಕ್ಷಿಣ ಜಿಲ್ಲಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.  

ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಧೀಶ ಸರ್ಹ ನೆಟಬರ್ನ್ ಅವರು ಅರ್ಜಿಯನ್ನು ತಿರಸ್ಕರಿಸಿದ್ದಾರೆ. ದಿನಾಂಕವನ್ನು ಮುಂದೂಡುವುದರಿಂದ ದೋಷರೋಪದ ಮೇಲೆ ಯಾವುದೇ ಪರಿಣಾಮ ಬೀರಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.

ಭಾರತದ ಉಪರಾಯಭಾರಿ ಆಗಿ ನೇಮಕಗೊಂಡಿದ್ದ ದೇವಯಾನಿ ಕೋಬ್ರಾಗಡೆ ತಮ್ಮ ಮನೆಗೆಲಸದಾಕೆ ಸಂಗೀತಾ ರಿಚರ್ಡ್ ಎಂಬಾಕೆಗೆ ನೀಡುತ್ತಿರುವ ಸಂಬಳದ ಕುರಿತು ವೀಸಾ ದಾಖಲಾತಿಯಲ್ಲಿ ತಪ್ಪು ಮಾಹಿತಿ ನೀಡಿದ್ದ ಆರೋಪದಡಿ ಡಿಸೆಂಬರ್ 12ರಂದು ದೇವಯಾನಿಯನ್ನು ಬಂಧಿಸಲಾಗಿತ್ತು. ಆ ನಂತರ 2.4 ಲಕ್ಷ ಡಾಲರ್ ಭದ್ರತೆ ನೀಡಿ ಜಾಮೀನಿನ ಮೇಲೆ ದೇವಯಾನಿ ಬಿಡುಗಡೆ ಆಗಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.