ಈಗಿನ ಸುದ್ದಿ

ಚುನಾವಣೆ ಸ್ಪರ್ಧಿಸಲು ನಂದನ್ ನಿಲೇಕಣಿ ರೆಡಿ

ಚುನಾವಣೆ ಸ್ಪರ್ಧಿಸಲು ನಂದನ್ ನಿಲೇಕಣಿ ರೆಡಿ
Published On :

ಬೆಂಗಳೂರು: ಇನ್ಫೋಸಿಸ್‌ನ ಸಹ ಸಂಸ್ಥಾಪಕ ನಂದನ್ ನಿಲೇಕಣಿ 2014ರಲ್ಲಿ ರಾಜಕಾರಣಕ್ಕೆ ಪ್ರವೇಶ ಮಾಡುತ್ತಾರೆ ಎಂದಿದ್ದ ಊಹೆ ಈಗ ನಿಜವಾಗಿದೆ. ಅಂದಹಾಗೆ ನಿಲೇಕಣಿ ಇದೀಗ ಚುನಾವಣೆ ಸ್ಪರ್ಧಿಸಲು ಸಿದ್ಧರಾಗಿದ್ದು, ಕಾಂಗ್ರೆಸ್ ಪಕ್ಷ ಅವರನ್ನು ಬೆಂಬಲಿಸಲಿದೆ.

ರಾಜಕಾರಣದ ಮೂಲಕ ನಾವು ಬದಲಾವಣೆಯನ್ನು ತರಬಹುದು. ಆ ಬದಲಾವಣೆಯನ್ನೇ ನಾನು ಬಯಸುತ್ತೇನೆ ಎಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಿಲೇಕಣಿ ಅವರು ಹೇಳಿದ್ದಾರೆ. ನನಗೆ ಮತ್ತು ನನ್ನ ಯೋಚನೆಗಳಿಗೆ ಕಾಂಗ್ರೆಸ್ ಬೆಂಬಲವಿದೆ ಎಂದು ಹೇಳಿದ ನಿಲೇಕಣಿ, ಸರ್ಕಾರದ ಆಧಾರ ಕಾರ್ಡ್ ಯೋಜನೆಯ ಉಸ್ತುವಾರಿಯನ್ನು ವಹಿಸಿದ್ದರು.


ಆದಾಗ್ಯೂ, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ವಲಯದಿಂದ ಕಾಂಗ್ರೆಸ್ ನಿಲೇಕಣಿ ಅವರನ್ನು ಕಣಕ್ಕಿಳಿಸುವ ಬಗ್ಗೆ ಯೋಚಿಸಿದೆ ಎಂದು ಹೇಳಲಾಗುತ್ತಿದೆ.

ನಾನು 'ಐಡಿಯಾಸ್ ಫಾರ್ ಬೆಂಗಳೂರು' ಎಂಬ ಯೋಜನೆಯನ್ನು ಆರಂಭಿಸುತ್ತಿದ್ದೇನೆ. ಬೆಂಗಳೂರು ನಗರವನ್ನು ಇನ್ನಷ್ಟು ಉತ್ತಮ ಪಡಿಸುವುದಕ್ಕಾಗಿ ಜನರು ಇಲ್ಲಿ ಸಲಹೆಗಳನ್ನು ನೀಡಬಹುದು ಎಂದು ನಿಲೇಕಣಿ ಹೇಳಿದ್ದಾರೆ.

ಏತನ್ಮಧ್ಯೆ, ಕಾಂಗ್ರೆಸ್‌ಗೆ ಸೇರುವ ಬಗ್ಗೆ ನಿಲೇಕಣಿ ಅವರು ಈವರೆಗೂ ಅಧಿಕೃತವಾದ ಹೇಳಿಕೆ ನೀಡಿಲ್ಲ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.