ಕಾಂಗ್ರೆಸ್ ಮತ್ತು ಬಿಜೆಪಿಯನ್ನು ಸೋಲಿಸುವುದೊಂದೇ ಗುರಿ: ಕಾರಾಟ್
ಎರ್ನಾಕುಳಂ: ನರೇಂದ್ರ ಮೋದಿಯವರನ್ನು ಪರಾಭವಗೊಳಿಸುವುದಕ್ಕಾಗಿ ಕಾಂಗ್ರೆಸ್ಸೇತರ 'ಜಾತ್ಯಾತೀತ' ಪಕ್ಷಗಳು ಫೆಬ್ರವರಿ ತಿಂಗಳ ಆರಂಭದಲ್ಲಿ ನಿರ್ಧಾರ ಕೈಗೊಳ್ಳಲಿವೆ ಎಂದು ಸಿಪಿಎಂ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕಾರಾಟ್ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷ ಮತ್ತು ಅದರ ಮಿತ್ರಪಕ್ಷಗಳು ಬಿಜೆಪಿ ಮತ್ತು ನರೇಂದ್ರ ಮೋದಿ ವಿರುದ್ಧ ಹೋರಾಡಲು ಸಿದ್ಧವಾಗಿವೆ. ಬಿಜೆಪಿ ಮತ್ತು ಮೋದಿಯವರ ವಿರುದ್ಧ ಸ್ಪರ್ಧೆಗಿಳಿಯಲು ಕಾಂಗ್ರೆಸ್ಸೇತರ, ಜಾತ್ಯಾತೀತ ಪಕ್ಷಗಳಿಗಷ್ಟೇ ಸಾಧ್ಯ ಎಂದು ಎರ್ನಾಕುಳಂ ಪ್ರೆಸ್ ಕ್ಲಬ್‌ನಲ್ಲಿ ಮಾತನಾಡಿದ ಕಾರಾಟ್ ಹೇಳಿದ್ದಾರೆ.
ಏತನ್ಮಧ್ಯೆ, ಸಿಪಿಎಂ ಮತ್ತು ಇತರ ಎಡರಂಗ ಪಕ್ಷಗಳು ಕಾಂಗ್ರೆಸ್ಸೇತರ ಮತ್ತು ಬಿಜೆಪಿಯೇತರ ಪಕ್ಷಗಳನ್ನು ಒಗ್ಗಟ್ಟಾಗಿಸುವಲ್ಲಿ ನಿರತವಾಗಿವೆ.
ಬಿಜೆಪಿ ಮತ್ತು ಕಾಂಗ್ರೆಸ್ ವಿರುದ್ಧ ಸ್ಪರ್ಧೆಗೆ ಮೂರನೇ ರಂಗ ಸಜ್ಜಾಗಿದೆಯೇ? ಎಂಬ ಪ್ರಶ್ನೆಗೆ ಉತ್ತರಿಸಿದ ಕಾರಾಟ್, ನಾವೆಲ್ಲ ಪಕ್ಷದವರೊಂದಿಗೆ ಸಂಪರ್ಕದಲ್ಲಿದ್ದೇವೆ. ಚುನಾವಣೆಗೆ ಸಜ್ಜಾಗಲು ನಾನು ಪ್ರಾದೇಶಿಕ ಮಟ್ಟದಲ್ಲಿ ಎಲ್ಲರನ್ನೂ ಒಗ್ಗೂಡಿಸುತ್ತಿದ್ದೇವೆ ಎಂದು ಹೇಳಿದ್ದಾರೆ.
ಆ ವರ್ಷ ಬೇಗನೆ ಚುನಾವಣೆ ನಡೆಯಲಿದೆ. 14 ಪಕ್ಷಗಳು ಒಂದಾಗಿದ್ದು, ನಮ್ಮೆಲ್ಲರ ನಿಲುವು ಒಂದೇ ಆಗಿದೆ. ಫೆಬ್ರವರಿಯಲ್ಲಿ ಈ ಬಗ್ಗೆ ಸರಿಯಾದ ತೀರ್ಮಾನ ಕೈಗೊಳ್ಳಲಿವೆ. ಏನಿದ್ದರೂ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಗೆಲವು ಸಾಧಿಸದಂತೆ ನೋಡಿಕೊಳ್ಳುವುದು ನಮ್ಮ ಉದ್ದೇಶ ಎಂದು ಕಾರಾಟ್ ನುಡಿದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

