ದೇಶವನ್ನು ರಕ್ಷಿಸುವ ಆತುರದಲ್ಲಿದ್ದೇವೆ: ಕೇಜ್ರಿವಾಲ್

ನವದೆಹಲಿ: ಶನಿವಾರ ಜನತಾ ದರ್ಬಾರ್ನಲ್ಲಿ ಎಲ್ಲರನ್ನೂ ಭೇಟಿ ಮಾಡಲು ಆಗದೇ ಇರುವುದಕ್ಕೆ ಕ್ಷಮೆಯಾಚಿಸಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ನಾವು ದೇಶವನ್ನು ರಕ್ಷಿಸುವ ಆತುರದಲ್ಲಿದ್ದೇವೆ ಎಂದು ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಕೇಜ್ರಿವಾಲ್, ನಮ್ಮ ದೇಶವನ್ನು ರಕ್ಷಿಸುವ ಆತುರದಲ್ಲಿದ್ದೀವಿ. ನಾವೀಗ ಅದಕ್ಕೆ ಮುತುವರ್ಜಿ ವಹಿಸದೇ ಇದ್ದರೆ ದೇಶ ಬದಲಾಗಲ್ಲ ಎಂದು ಹೇಳಿದ್ದಾರೆ.
ಅದೇ ವೇಳೆ ಜನತಾ ದರ್ಬಾರ್ನ ಅವ್ಯವಸ್ಥೆ ಬಗ್ಗೆ ಮಾತನಾಡಿದ ಕೇಜ್ರಿವಾಲ್, 500-700 ಜನರಿಗೆ ವ್ಯವಸ್ಥೆ ಮಾಡಲಾಗಿತ್ತು. ಇಷ್ಟೊಂದು ಜನ ಬರುತ್ತಾರೆ ಎಂದು ನಮಗೆ ಗೊತ್ತಿರಲಿಲ್ಲ. ಆದರೂ, ಮುಂದಿನ ಜನತಾ ದರ್ಬಾರ್ ವ್ಯವಸ್ಥಿತವಾಗಿ ಮಾಡಲಾಗುವುದು ಎಂದು ಹೇಳಿದ್ದಾರೆ.
ಇದೀಗ ಮುಂದಿನ ದರ್ಬಾರ್ ಯಾವಾಗ ನಡೆಯುತ್ತದೆ ಎಂದು ಈಗಲೇ ಹೇಳಲು ಸಾಧ್ಯವಿಲ್ಲ. ಅಧಿಕಾರಿಗಳ ಜತೆ ಸಮಾಲೋಚನೆ ನಜೆಸಿ ಆಮೇಲೆ ಸ್ಟೇಡಿಯಂನಲ್ಲಿ ಜನತಾ ದರ್ಬಾರ್ ನಡೆಸಲಾಗುವುದು ಎಂದು ಕೇಜ್ರಿವಾಲ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


