ಈಗಿನ ಸುದ್ದಿ

ರಾಜ್ಯದಿಂದ ರಾಹುಲ್ ಗಾಂಧಿ ಸ್ಪರ್ಧೆ?

ರಾಜ್ಯದಿಂದ ರಾಹುಲ್ ಗಾಂಧಿ ಸ್ಪರ್ಧೆ?
Published On :

ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಕರ್ನಾಟಕದಿಂದಲೇ ಸ್ಪರ್ಧಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಕುರಿತು ಎಐಸಿಸಿ, ಕೆಪಿಸಿಸಿಗೆ ಸಂದೇಶ ರವಾನಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ರಾಹುಲ್ ಗಾಂಧಿ ಅವರು ರಾಜ್ಯದ ಯಾವುದಾದರೂ ಒಂದು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಶಿವಮೊಗ್ಗ ಅಥವಾ ಸ್ಯಾಂಡಲ್‌ವುಡ್ ನಟಿ ರಮ್ಯಾ ಪ್ರತಿನಿಧಿಸುತ್ತಿರುವ ಮಂಡ್ಯ ಲೋಕಸಭಾ ಕ್ಷೇತ್ರದಿಂದ ರಾಹುಲ್ ಗಾಂಧಿ ಕಣಕ್ಕಿಳಿಯುವ ಸಾಧ್ಯತೆ ಇದೆ.

ಕಷ್ಟ ಬಂದಾಗ ಕರ್ನಾಟಕದ ಕಡೆ ನೋಡುವ ಕಾಂಗ್ರೆಸ್ ಇದೀಗ ಮತ್ತೆ ರಾಜ್ಯದ ಮೇಲೆ ಗಾಂಧಿ ಕುಟುಂಬದ ಕಣ್ಣು ಬಿದ್ದಿದೆ. 1978ರಲ್ಲಿ ಮಾಜಿ ಪ್ರಧಾನಿ ದಿ.ಇಂದಿರಾ ಗಾಂಧಿ ಅವರು ಚಿಕ್ಕಮಗಳೂರಿನಿಂದ ಸ್ಪರ್ಧಿಸಿದ್ದರು. ಇದು ಇಂದಿರಾ ರಾಜಕೀಯ ಪುನರ್ಜನ್ಮಕ್ಕೆ ಕಾರಣವಾಗಿತ್ತು. ಅಲ್ಲದೆ ರಾಹುಲ್ ಗಾಂಧಿ ಅವರ ತಾಯಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಸಹ 1999ರಲ್ಲಿ ಬಳ್ಳಾರಿಯಲ್ಲಿ ಸ್ಪರ್ಧಿಸಿ ಜಯಗಳಿಸಿದ್ದರು. ಆದರೆ ಬಳ್ಳಾರಿಯಲ್ಲಿ ಗೆದ್ದಿದ್ದರೂ ಸೋನಿಯಾ ಕ್ಷೇತ್ರ ತೊರೆದಿದ್ದರು.

ಈ ಮಧ್ಯೆ ಲೋಕಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ರಾಹುಲ್ ಗಾಂಧಿ, 2014ರ ಲೋಕಸಭೆ ಚುನಾವಣೆಗೆ ಪ್ರಣಾಳಿಕೆ ಸಿದ್ಧಪಡಿಸುವ ಹಿನ್ನೆಲೆಯಲ್ಲಿ ವಿವಿಧ ಕ್ಷೇತ್ರಗಳ ತಜ್ಞರ ಜೊತೆ ಸಮಾಲೋಚಿಸಲು ಇಂದು ನಗರಕ್ಕೆ ಆಗಮಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.