ಈಗಿನ ಸುದ್ದಿ

ನಾನು ಪ್ರಧಾನಿ ಆಕಾಂಕ್ಷಿಯಲ್ಲ: ಶರದ್ ಪವಾರ್

Published On :

ನವದೆಹಲಿ: 2014 ಲೋಕಸಭಾ ಚುನಾವಣೆಯಲ್ಲಿ ನಾನು ಪ್ರಧಾನಿ ಆಕಾಂಕ್ಷಿ ಅಲ್ಲ ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ.

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ ಮುಖ್ಯಸ್ಥ ಶರದ್ ಪವಾರ್ ಪ್ರಧಾನಿಯಾದರೆ ಖುಷಿಯಾಗುತ್ತದೆ. ಪವಾರ್ 1992ರಿಂದಲೂ ಪ್ರಧಾನಿ ರೇಸ್‌ನಲ್ಲಿದ್ದವರು. ಆದರೆ ದೆಹಲಿ ರಾಜಕಾರಣದಿಂದಾಗಿ ಅವರಿಗೆ ಅವಕಾಶ ತಪ್ಪಿದೆ ಎಂದು  ಕೇಂದ್ರ ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ ಶನಿವಾರ ಹೇಳಿದ್ದರು.

ಈ ಮಾತುಗಳನ್ನಾಡಿದ ನಂತರ ಶಿಂಧೆ, ತನ್ನ ಮಾತುಗಳನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ. ಆದಾಗ್ಯೂ, ಪ್ರಧಾನಿ ಸ್ಥಾನಕ್ಕೆ ಮೊದಲ ಆಯ್ಕೆ ಯಾವತ್ತೂ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರೇ ಆಗಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದರು.

ಅದೇ ವೇಳೆ ಶಿಂಧೆ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಎನ್‌ಸಿಪಿ ವಕ್ತಾರ ನವಾಬ್ ಮಲಿಕ್, ಶಿಂಧೆಯವರ ಮಾತಿಗೆ ನಾವು ಋಣಿ. ನಮ್ಮ ನಾಯಕರು ಪ್ರಧಾನಿಯಾಗಲು ಅರ್ಹತೆ ಹೊಂದಿದ್ದಾರೆ. ಆದರೆ ನಮಗೆ ನಮ್ಮ ಪಕ್ಷದ ಶಕ್ತಿಯ ಬಗ್ಗೆ ಅರಿವಿದೆ ಹಾಗೂ ಶರದ್ ಪವಾರ್ ಪ್ರಧಾನಿ ರೇಸ್‌ನಲ್ಲಿ ಇಲ್ಲ ಎಂಬುದನ್ನು ನಾವು ಸ್ಪಷ್ಟಪಡಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.