ಪ್ರಧಾನಿ ಹುದ್ದೆ ನಿಭಾಯಿಸಲು ಸಿದ್ಧ: ರಾಹುಲ್ ಗಾಂಧಿ

ನವದೆಹಲಿ: ಇದೇ ಶುಕ್ರವಾರ ನಿಗದಿಯಾಗಿರುವ ಎಐಸಿಸಿ ಸಭೆಯಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಕಾಂಗ್ರೆಸ್ ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸುವುದು ಬಹುತೇಕ ಖಚಿತವಾಗಿದೆ. ಈ ಮಧ್ಯೆ ತಾವು ಪ್ರಧಾನಿ ಹುದ್ದೆ ನಿಭಾಯಿಸಲು ಸಿದ್ಧ ಎಂದು ಮಂಗಳವಾರ ರಾಹುಲ್ ಗಾಂಧಿ ಹೇಳಿದ್ದಾರೆ.
ನಾನು ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿ. ಪಕ್ಷ ನನಗೆ ಯಾವುದೇ ಜವಾಬ್ದಾರಿ ನೀಡಿದರು ಅದನ್ನು ಸಮರ್ಥವಾಗಿ ನಿಭಾಯಿಸುತ್ತೇನೆ. ಪಕ್ಷಕ್ಕಾಗಿ ನಾನು ಏನೂ ಬೇಕಾದರು ಮಾಡಲು ಸಿದ್ಧ. ನನಗೆ ಜವಾಬ್ದಾರಿ ನೀಡುವ ಬಗ್ಗೆ ಪಕ್ಷದ ಹಿರಿಯ ನಾಯಕರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ರಾಹುಲ್ ಹಿಂದಿ ದಿನಪತ್ರಿಕೆ 'ದೈನಿಕ ಬಾಸ್ಕರ್' ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.
ಮುಂಬರುವ 2014ರ ಲೋಕಸಭಾ ಚುನಾವಣೆಯಲ್ಲೂ ತಮ್ಮ ಪಕ್ಷ ಭರ್ಜರಿ ಗೆಲುವು ಸಾಧಿಸುವ ಮೂಲಕ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಕಾಂಗ್ರೆಸ್ ಯುವರಾಜ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ತನ್ನ ಮಿತ್ರ ಪಕ್ಷಗಳನ್ನು ಕಳೆದುಕೊಳ್ಳಲಿದೆ ಎಂಬ ವರದಿಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿದ ರಾಹುಲ್, ಅದು ಸತ್ಯಕ್ಕೆ ದೂರವಾದ ಮಾತು. ಮಹಾರಾಷ್ಟ್ರ ಮತ್ತು ಜಮ್ಮು, ಕಾಶ್ಮೀರದಲ್ಲಿ ಈಗಲೂ ನಮ್ಮ ಮೈತ್ರಿ ಮುಂದುವರಿದಿದೆ ಎಂದರು.
ಇದೇ ವೇಳೆ ತಮ್ಮ ಸಹೋದರಿ ಪ್ರಿಯಾಂಕಾ ವಾದ್ರಾ ಅವರು ಮುಂದಿನ ಚುನಾವಣೆಯಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ ಎಂಬ ವರದಿಗಳನ್ನು ಸಹ ರಾಹುಲ್ ತಳ್ಳಿಹಾಕಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


