ಕೇಜ್ರಿವಾಲ್ ವಿರುದ್ಧವೇ ಬಿನ್ನಿ ವಾಗ್ದಾಳಿ

ನವದೆಹಲಿ: ಕಾನೂನು ಸಚಿವ ಸೋಮ್‌ನಾಥ್ ಭಾರ್ತಿ ಅವರ ಪ್ರಕರಣದಿಂದ ತೀವ್ರ ಮುಜುಗರಕ್ಕೆ ಸಿಲುಕಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಈಗ ಮತ್ತೊಂದು ಇರುಸುಮುರುಸಿನ ಪ್ರಸಂಗ ಎದುರಾಗಿದೆ.
ಆಮ್ ಆದ್ಮಿ ಪಕ್ಷ(ಎಎಪಿ)ದ ಶಾಸಕ ವಿನೋದ್ ಕುಮಾರ್ ಬಿನ್ನಿ ಅವರು ಬುಧವಾರ ಕೇಜ್ರಿವಾಲ್ ವಿರುದ್ಧವೇ ವಾಗ್ದಾಳಿ ನಡೆಸಿದ್ದಾರೆ.
ಕೇಜ್ರಿವಾಲ್ ಬರಿ ಸುಳ್ಳುಗಾರ ಎಂದಿರುವ ಬಿನ್ನಿ, ಅಧಿಕಾರ ಬಂದನಂತರ ಬೇರೆ ಪಕ್ಷದವರಂತೆ ಕೇಜ್ರಿವಾಲ್ ಸಹ ಬದಲಾಗಿದ್ದಾರೆ. ಈಗ ಅವರನ್ನು ಭೇಟಿ ಮಾಡುವುದು ಕಷ್ಟ ಎಂದು ಹೇಳಿದ್ದಾರೆ. ಅಲ್ಲದೆ ಕಾಂಗ್ರೆಸ್ ವಿಚಾರದಲ್ಲೂ ದೆಹಲಿ ಸಿಎಂ ಮೃದುಧೋರಣೆ ತಾಳಿದ್ದಾರೆ ಎಂದು ಆರೋಪಿಸಿದ್ದಾರೆ.
ಜನರ ಭಾವನೆಗಳೊಂದಿಗೆ ಎಎಪಿ ಚೆಲ್ಲಾಟವಾಡುತ್ತಿದೆ ಎಂದು ಆರೋಪಿಸಿರುವ ಬಿನ್ನಿ, ತಾವು ಎಎಪಿ ತೊರೆದು ಬೇರೆ ಪಕ್ಷಕ್ಕೆ ಹೋಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಇದೇ ವೇಳೆ, ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸಾಕ್ಷ್ಯಗಳ ಮೇಲೆ ಪ್ರಭಾವ ಬೀರಿದ ಆರೋಪ ಎದುರಿಸುತ್ತಿರುವ ದೆಹಲಿ ಕಾನೂನು ಸಚಿವ ಸೋಮ್‌ನಾಥ್ ಭಾರ್ತಿ ಅವರು ರಾಜಿನಾಮೆ ನೀಡಬೇಕು ಎಂದು ಬಿನ್ನಿ ಒತ್ತಾಯಿಸಿದ್ದಾರೆ.
ಇನ್ನು ವಿನೋದ್ ಬಿನ್ನಿ ಟೀಕೆಗೆ ತಾವು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


