ಈಗಿನ ಸುದ್ದಿ

ಪಿಎಸ್‌ಐ ಬಂಡೆ ಸಾವು: ಬಸ್ಸಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಜನ

Published On :

ಆಳಂದ: ಪಿಎಸ್‌ಐ ಮಲ್ಲಿಕಾರ್ಜುನ ಬಂಡೆ ಸಾವಿನಿಂದಾಗಿ ಆಳಂದ ತಾಲೂಕು ಹಾಗೂ ಬಂಡೆ ಹುಟ್ಟೂರು ಖಜೂರಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಬಂಡೆ ಅವರ ಶವ ಹಸ್ತಾಂತರದಲ್ಲಿ ವಿಳಂಬವಾಗುತ್ತಿರುವ ಘಟನೆ ಗ್ರಾಮಸ್ಥರನ್ನು ಕೆರಳಿಸಿದೆ.

ಏತನ್ಮಧ್ಯೆ ದುಷ್ಕರ್ಮಿಗಳ ಗುಂಪ್ಪೊಂದು ಉಮ್ಮರ್ಗಾ- ಖಜೂರಿ ರಾಜ್ಯ ಹೆದ್ದಾರಿ ಮೇಲೆ ರಾಜ್ಯ ಸಾರಿಗೆ ಸಂಸ್ಥೆಗೆ ಸೇರಿದ್ದ 2 ಬಸ್ಸುಗಳಿಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆಯಲ್ಲಿ 1 ಬಸ್ಸು ಸಂಪೂರ್ಣ ಸುಟ್ಟು ಹೋದರೆ ಇನ್ನೊಂದು ಬಸ್ಸು ಜಖಂಗೊಂಡಿದೆ. ಅಲ್ಲದೆ ಬಾಲಕಿಯೋರ್ವಳು ತೀವ್ರವಾಗಿ ಗಾಯಗೊಂಡಿದ್ದಾಳೆ.

ಇತ್ತ ಆಳಂದ ಪಟ್ಟಣದಲ್ಲಿ ಅಘೋಷಿತ ಬಂದ್ ವಾತಾವರಣ ನಿರ್ಮಾಣವಾಗಿದೆ. ಇಲ್ಲಿ ಪೋಸ್ಟರ್ ಹರಿದ ವಿಚಾರ ಮುಂದಿಟ್ಟುಕೊಂಡು ಎರಡು ಗುಂಪುಗಳ ಮದ್ಯೆ ಜಗಳವಾಗಿದ್ದು ಅದು ವಿಕೋಪಕ್ಕೆ ಹೋಗುವ ಲಕ್ಷಣ ಕಂಡಾಗ ಪೊಲೀಸರು ಗುಂಪು ಚದುರಿಸಲು ಲಾಠಿಪ್ರಹಾರ ಮಾಡಿದ್ದಾರೆ. ದುಷ್ಕರ್ಮಿಗಳು ಇದೇ ಸಂದರ್ಭದಲ್ಲಿ ಕೆಲವು ಪ್ರದೇಶಗಳಲ್ಲಿ ಕಲ್ಲು ತೂರಾಟ ಮಾಡಿದ್ದಾರೆ. ಈ ಘಟನೆ ಸಂಬಂಧ 10 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.