ಈಗಿನ ಸುದ್ದಿ

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಎಎಪಿ ನಡುವೆ ನೇರ ಹಣಾಹಣಿ: ಕೇಜ್ರಿವಾಲ್

Published On :

ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ(ಬಿಜೆಪಿ) ಮತ್ತು ಆಮ್ ಆದ್ಮಿ ಪಕ್ಷ(ಎಎಪಿ)ದ ನಡುವೆ ನೇರ ಹಣಾಹಣಿ ಏರ್ಪಡಲಿದೆ ಎಂದು ಎಎಪಿ ಮುಖ್ಯಸ್ಥ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಬುಧವಾರ ಹೇಳಿದ್ದಾರೆ.

ಭ್ರಷ್ಟಾಚಾರದಲ್ಲಿ ಮುಳಿಗಿರುವ ಕಾಂಗ್ರೆಸ್‌ಗೆ ಭವಿಷ್ಯವಿಲ್ಲ. ಹೀಗಾಗಿ ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯೇ ನಮಗೆ ನೇರ ಪ್ರತಿಸ್ಪರ್ಧಿ ಎಂದು ಕೇಜ್ರಿವಾಲ್ ತಿಳಿಸಿದ್ದಾರೆ.

ಈಗ ಭಾರತೀಯರ ಮುಂದೆ ಎರಡು ಆಯ್ಕೆಗಳಿವೆ. ಒಂದು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಂತಹ ಭ್ರಷ್ಟ ಸಚಿವರನ್ನು ಹೊಂದಿರುವ ಬಿಜೆಪಿ ಮತ್ತೊಂದು ವಿಭಿನ್ನ ರಾಜಕೀಯ ಶೈಲಿಯಿಂದ ಮತ್ತು ಪ್ರಮಾಣಿಕ ರಾಜಕೀಯದ ಮೂಲಕ ದೇಶದಲ್ಲಿ ಗುರುತಿಸಿಕೊಳ್ಳುತ್ತಿರುವ ಎಎಪಿ. ಹೀಗಾಗಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯೇ ನಮಗೆ ನೇರ ಎದುರಾಳಿ ಎಂದು ದೆಹಲಿ ಸಿಎಂ ಹೇಳಿದ್ದಾರೆ.

ಇನ್ನು ತಮ್ಮ ಹಾಲಿ ಎಎಪಿ ಶಾಸಕರಾರೂ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಕೇಜ್ರಿವಾಲ್ ಅವರು ಸ್ಪಷ್ಟಪಡಿಸಿದ್ದಾರೆ. ಅಲ್ಲದೆ ತಮ್ಮ ಸರ್ಕಾರವನ್ನೇ ಟೀಕೆ ಮಾಡಿದ್ದ ಎಎಪಿ ಶಾಸಕ ವಿನೋದ್ ಕುಮಾರ್ ಬಿನ್ನಿ ಅವರ ಹೇಳಿಕೆ ಅಸಂಬದ್ಧ ಎಂದಿದ್ದಾರೆ.

ಬಿನ್ನಿ ಅವರು ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ಕೇಳಿದ್ದರು. ಅಲ್ಲದೆ ಎಎಪಿ ಸರ್ಕಾರದಲ್ಲಿ ಸಚಿವ ಸ್ಥಾನ ನೀಡುವಂತೆ ಸಹ ಒತ್ತಾಯಿಸಿದ್ದರು. ಆದರೆ ನಾನು ಅದಕ್ಕೆ ಅವಕಾಶ ನೀಡಿರಲಿಲ್ಲ. ಹೀಗಾಗಿ ಅವರು ಸರ್ಕಾರದ ವಿರುದ್ಧ ಅಸಮಧಾನ ವ್ಯಕ್ತಪಡಿಸಿದ್ದಾರೆ ಎಂದಿದ್ದಾರೆ.

ಎಎಪಿ ಸರ್ಕಾರ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂದು ಬಿನ್ನಿ ಆರೋಪಿಸಿದ್ದರು. ಈ ಸಂಬಂಧ ಬಿನ್ನಿ ಅವರಿಗೆ ಶೋಕೇಸ್ ನೋಟಿಸ್ ನೀಡಲು ನಿರ್ಧರಿಸಲಾಗಿದೆ ಎಂದು ಎಎಪಿ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.