ಈಗಿನ ಸುದ್ದಿ

ದೆಹಲಿಯಲ್ಲಿ ವಿದೇಶಿ ಮಹಿಳೆ ಮೇಲೆ ಗ್ಯಾಂಗ್‌ರೇಪ್

Published On :

ನವದೆಹಲಿ: ನವದೆಹಲಿ ರೇಲ್ವೇ ನಿಲ್ದಾಣದ ಬಳಿ ಮಂಗಳವಾರ ರಾತ್ರಿ 51 ಹರೆಯದ ವಿದೇಶಿ ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಬಗ್ಗೆ ವರದಿಯಾಗಿದೆ.

ಡೆರ್ನಾರ್ಕ್ ಮೂಲದ ಈ ಮಹಿಳೆ ಪ್ರವಾಸಿ ವೀಸಾ ಪಡೆದು ಭಾರತಕ್ಕೆ ಭೇಟಿ ನೀಡಿದ್ದು, ಮಂಗಳವಾರ ಮ್ಯೂಸಿಯಂಗೆ ಹೋಗಿದ್ದರು. ಅಲ್ಲಿಂದ ಅವರು ತಂಗಿದ್ದ ಪಹಾರ್‌ಗಂಜ್ ಹೋಟೆಲ್‌ಗೆ ಮರಳುವ ವೇಳೆ ದಾರಿ ತಪ್ಪಿದೆ. ಈ ಹೊತ್ತಲ್ಲಿ ಕೆಲವು ಯುವಕರು ಸೇರಿ ಅವರ ವಸ್ತುಗಳನ್ನು ದೋಚಿ ನಂತರ ಸಾಮೂಹಿಕ ಅತ್ಯಾಚಾರಗೈದಿದ್ದಾರೆ.

ನಂತರ ಹೋಟೆಲ್‌ಗೆ ಮರಳಿದ ಈ ಮಹಿಳೆ ಪೊಲೀಸರಿಗೆ ದೂರು ನೀಡಿದ್ದು, ಪ್ರಸ್ತುತ ಘಟನೆ ಬಗ್ಗೆ ತನಿಖೆ ಮುಂದುವರಿದಿದೆ.

ದೆಹಲಿ ಪೊಲೀಸರು ಶಂಕೆಯ ಮೇರೆಗೆ ಪಹಾರ್‌ಗಂಜ್ ಪ್ರದೇಶದಲ್ಲಿ ರಾತ್ರಿ ಹೊತ್ತು ಅಡ್ಡಾಡುತ್ತಿದ್ದ ಕೆಲವು  ವ್ಯಕ್ತಿಗಳನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

ಅತ್ಯಾಚಾರಕ್ಕೊಳಗಾದ ಮಹಿಳೆ ಬುಧವಾರ ಬೆಳಗ್ಗೆ ಸ್ವದೇಶಕ್ಕೆ ಮರಳಿರುವುದಾಗಿ ಬಲ್ಲಮೂಲಗಳು ಹೇಳಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.